ಶಿವಮೊಗ್ಗ: ನಗರದ ಸಾಗರ ರಸ್ತೆಯಲ್ಲಿರುವ ಖಾಸಗಿ ವಸತಿಗೃಹವೊಂದರಲ್ಲಿ ದಾವಣಗೆರೆ ಮೂಲದ ಮಹಿಳೆಯೊಬ್ಬರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಗೀತಾ (48) ಆತ್ಮಹತ್ಯೆಗೆ ಮುಂದಾದ ಮಹಿಳೆಯಾಗಿದ್ದು,ಈಕೆಯ ದೇಹ ಶೇಕಡಾ 70ರಷ್ಟು ಸುಟ್ಟಿದ್ದು, ತಕ್ಷಣ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪರಿಚಿತ ವ್ಯಕ್ತಿಯೊಂದಿಗೆ ಲಾಡ್ಜ್ ನಲ್ಲಿ ತಂಗಿದ್ದ ಗೀತಾ, ಜಗಳದ ನಂತರ ಈ ಕೃತ್ಯಕ್ಕೆ ಮುಂದಾಗಿರುವ ಶಂಕೆ ವ್ಯಕ್ತವಾಗಿದೆ. ಆಕೆಯೊಂದಿಗೆ ಇದ್ದ ವ್ಯಕ್ತಿಗೂ ಅಲ್ಪಸ್ವಲ್ಪ ಗಾಯಗಳಾಗಿವೆ.
ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
