Trending

ಪೋಕ್ಸೊ ಕೇಸ್​​​​​​ನಲ್ಲಿ​​​​​ ಮುರುಘಾಶ್ರೀ ನಿರ್ದೋಷಿ : ಕೋರ್ಟ್​​​ ಮಹತ್ವದ ತೀರ್ಪು

Spread the love

ಚಿತ್ರದುರ್ಗ: ಅಪ್ರಾಪ್ತ ಬಾಲಕಿಯರಿಬ್ಬರಿಗೆ ಕಿರುಕುಳ ನೀಡಿದ ಆರೋಪದಡಿ A-1 ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾಗಿದ್ದ ಪೋಕ್ಸೊ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಕೇಸ್​​​ನಲ್ಲಿ ಮುರುಘಾಶ್ರೀ ನಿರ್ದೋಷಿ ಎಂದು ಚಿತ್ರದುರ್ಗ ಜಿಲ್ಲಾ ನ್ಯಾಯಾಲಯವು ಇಂದು ಮಹತ್ವದ ತೀರ್ಪು ಪ್ರಕಟಿಸಿತು.

ಪ್ರಕರಣ ಸಂಬಂಧ ಸುದೀರ್ಘ ವಿಚಾರಣೆ ನಡೆಸಿದ್ದು ಕೋರ್ಟ್​ ಇಂದು ತೀರ್ಪು ಪ್ರಕಟಿಸಿತು. ಎರಡನೇ ಜಿಲ್ಲಾ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗಂಗಾಧರ್‌ ಚನ್ನಬಸಪ್ಪ ಹಡಪದ ಅವರು ತೀರ್ಪು ಪ್ರಕಟಿಸಿದರು.

ತೀರ್ಪು ಪ್ರಕಟವಾಗುವ ಹಿನ್ನೆಲೆಯಲ್ಲಿ ದಾವಣಗೆರೆಯ ವಿರಕ್ತ ಮಠದಿಂದ ಬಿಗಿ ಭದ್ರತೆಯ ನಡುವೆ ಶಿವಮೂರ್ತಿ ಮುರುಘಾ ಶರಣರು‌ ನ್ಯಾಯಾಲಯದಲ್ಲಿ ಹಾಜರಾಗಿದ್ದರು.

ರಾಜ್ಯದ ಗಮನ ಸೆಳೆದಿದ್ದ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರ ವಿರುದ್ಧದ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರದ ಆರೋಪಗಳ ಪ್ರಕರಣದ ವಿಚಾರಣೆಯನ್ನು ಕೋರ್ಟ್​​​ ಮುಕ್ತಾಯಗೊಳಿಸಿ ಇಂದಿಗೆ ತೀರ್ಪು ಪ್ರಕಟಿಸುವುದಾಗಿ ನ.18ರಂದು ಹೇಳಿತ್ತು. ಪ್ರಕರಣದ ವಾದ-ಪ್ರತಿವಾದ ಆಲಿಸಿ ಕೋರ್ಟ್ ​ವಿಚಾರಣೆಯನ್ನು ನ.18ರಂದು ಮುಕ್ತಾಯಗೊಳಿಸಿತ್ತು.

ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ಪರವಾಗಿ ಕೋರ್ಟ್​ನಲ್ಲಿ ಖ್ಯಾತ ಕ್ರಿಮಿನಲ್ ವಕೀಲ ಸಿ.ವಿ.ನಾಗೇಶ್ ವಾದ ಮಂಡನೆ ಮಾಡಿದ್ದಾರೆ. ಸ್ವಾಮೀಜಿ ವಿರುದ್ಧದ ಎಲ್ಲ ಆರೋಪಗಳು ಸುಳ್ಳು ಎಂದು ವಾದಿಸಿದ್ದಾರೆ. ಪ್ರಾಸಿಕ್ಯೂಷನಲ್ ಪರ ವಕೀಲರು ಸಹ ವಾದ ಮಂಡಿಸಿದ್ದರು.

[pj-news-ticker]