ರಿಪ್ಪನ್ ಪೇಟೆ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೊಸನಗರ ರಸ್ತೆಯ ತಾವರೆಕೆರೆಗೆ ಉರುಳಿಬಿದ್ದ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಹಾಸನದಿಂದ ಕೊಲ್ಲೂರಿಗೆ ತೆರಳುತ್ತಿದ್ದ ಮಾರುತಿ ಆಲ್ಟೋ ಕಾರು ಹೊಸನಗರ ರಸ್ತೆಯ ತಾವರೆಕೆರೆ ಬಳಿ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿಬಿದ್ದಿದೆ. ಕಾರಿನಲ್ಲಿ ಮೂವರು ಪ್ರಯಾಣಿಸುತಿದ್ದು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಕಾರು ಏಕಾಏಕಿ ಕೆರೆಗೆ ಉರುಳುತ್ತಿದ್ದಂತೆ ಸ್ಥಳೀಯರು ಸಹಾಯಕ್ಕೆ ಧಾವಿಸಿ ಕಾರಿನಲ್ಲಿದ್ದವರನ್ನು ಮೇಲಕ್ಕೆತ್ತಿದ್ದಾರೆ ಎಂದು ಎನ್ನಲಾಗಿದೆ.
ರಿಪ್ಪನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
