ಬೆಂಗಳೂರು : ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ (94) ವಿಧಿವಶರಾಗಿದ್ದಾರೆ.
ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಶಾಮನೂರು ಶಿವಶಂಕರಪ್ಪ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.
94 ವರ್ಷದ ಶಾಮನೂರು ಶಿವಶಂಕರಪ್ಪ ಅವರಿಗೆ 94 ವಯಸ್ಸಾಗಿದ್ದು, ಭಾರತದಲ್ಲೇ ಹಿರಿಯ ಶಾಸಕ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಆದ್ರೆ, ವಯೋಸಹಜ ಅನಾರೋಗ್ಯದ ಹಿನ್ನೆಲೆ ಕಳೆ ದಿನಗಳಿಂದ ಬೆಂಗಳೂರಿನ ಸ್ಪರ್ಶ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು.
ಆಗಲೇ ಬೇರೆ ಬೇರೆ ಸುದ್ದಿ ಹರಿದಾಡಿದ್ದರಿಂದ ಈ ಬಗ್ಗೆ ಪುತ್ರ, ಸಚಿವ ಎಸ್ಎಸ್ ಮಲ್ಲಿಕಾರ್ಜುನ ಆವರು ಪ್ರತಿಕ್ರಿಯಿಸಿ ತಮ್ಮ ತಂದೆ ಚೆನ್ನಾಗಿದ್ದಾರೆ. ಗುರು ಹಿರಿಯರ ಆಶೀರ್ವಾದದಿಂದ ಇನ್ನೊಂದು ವಾರದಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಹೇಳಿದ್ದರು. ಆದ್ರೆ, ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಸ್ಪತ್ರೆ ಭೇಟಿ ನೀಡಿ ಶಿವಶಂಕರಪ್ಪ ಅವರ ಆರೋಗ್ಯದ ಕುರಿತು ವೈದ್ಯರಿಂದ ಮಾಹಿತಿ ಪಡೆದ್ದರು. ಹಾಗೇ ಅದೇ ವೇಳೆ ಆಸ್ಪತ್ರೆಯಲ್ಲಿದ್ದ ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ತಮ್ಮ ಮಾವನ ಆರೋಗ್ಯ ಸ್ಥಿತಿ ಮತ್ತು ಚಿಕಿತ್ಸೆ ಕುರಿತು ಸಿಎಂಗೆ ವಿವರಿಸಿದ್ದರು.
ಹೀಗೆ ಸಿಎಂ ಸೇರಿದಂತೆ ಹಲವು ರಾಜಕೀಯ ನಾಯಕರು ಆಸ್ಪತ್ರೆಗೆ ಭೇಟಿ ನೀಡಿ ಶಾಮನೂರು ಶಿವಶಂಕರಪ್ಪ ಅವರ ಆರೋಗ್ಯ ವಿಚಾರಿಸಿದ್ದರು. ಇನ್ನು ಶಾಮನೂರು ಶಿವಶಂಕರಪ್ಪ ಅವರ ಆರೋಗ್ಯ ಸುಧಾರಣೆಯಾಗಲಿ ಎಂದು ದಾವಣಗೆರೆಯಲ್ಲಿ ಅವರ ಅಭಿಮಾನಿಳಿಂದ ಪ್ರಾರ್ಥನೆ, ಪೂಜೆಗಳು ನಡೆದಿದ್ದವು.
