Trending

ಸಿಎಂ ಅವರಿಗೆ ಶುಭವಾಗಲಿ, ಗುಡ್ ಲಕ್ ಎಂದ ಡಿ.ಕೆ. ಶಿವಕುಮಾರ್

Spread the love

ಬೆಂಗಳೂರು, ಜ.6: ಸಿದ್ದರಾಮಯ್ಯ ಅವರಿಗೆ ಒಳ್ಳೆಯದಾಗಲಿ, “ಐ ವಿಶ್ ಹಿಮ್ ಆಲ್ ದ ಬೆಸ್ಟ್. ಗುಡ್ ಲಕ್” ಎಂದು ಡಿಸಿಎಂ ಹೇಳಿದರು.

ಸದಾಶಿವ ನಗರ ನಿವಾಸ ಹಾಗೂ ಬೆಂಗಳೂರು ವಿವಿಯ ಜ್ಞಾನಜ್ಯೋತಿ ಸಭಾಂಗಣದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಮಂಗಳವಾರ ಅವರು ಪ್ರತಿಕ್ರಿಯೆ ನೀಡಿದರು. ಪೂರ್ಣಾವಧಿಗೆ ನಾನೇ ಸಿಎಂ ಆಗಿ ಮುಂದುವರಿಯುವ ವಿಶ್ವಾಸವಿದೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಈ ರೀತಿ ಪ್ರತಿಕ್ರಿಯೆ ನೀಡಿದರು.

ಈ ಹೇಳಿಕೆಯಿಂದ ಮತ್ತೆ ಗೊಂದಲವಾಗುವುದಿಲ್ಲವೇ ಎಂದು ಕೇಳಿದಾಗ, ‘ನೀವುಗಳು (ಮಾಧ್ಯಮಗಳು) ಗೊಂದಲ ಮಾಡಿಕೊಳ್ಳುತ್ತಿದ್ದೀರಿ. ನಮಲ್ಲಿ ಯಾರಿಗೂ ಗೊಂದಲವಿಲ್ಲ’ ಎಂದು ತಿಳಿಸಿದರು.

ಸಿಎಂ ಅವರು ದಾಖಲೆ ನಿರ್ಮಿಸುತ್ತಿರುವ ಬಗ್ಗೆ ಕೇಳಿದಾಗ, ‘ಅವರಿಗೆ ಯಶಸ್ಸಾಗಲಿ, ಒಳ್ಳೆಯದಾಗಲಿ. ಅವರಿಗೆ ಹೆಚ್ಚು ಆರೋಗ್ಯ ಸಿಗಲಿ, ಜನರ ಸೇವೆ ಮಾಡುವ ಅವಕಾಶವನ್ನು ಭಗವಂತ ಅವರಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಹೇಳಿದರು.

[pj-news-ticker]