Trending

ಭದ್ರಾವತಿ: ಹಿರಿಯ ಕಾರ್ಮಿಕ ಮುಖಂಡ ಹಾಗೂ ಸಹಕಾರಿ ಧುರೀಣ ಕೆ.ಎನ್. ಭೈರಪ್ಪಗೌಡ ನಿಧನ

Spread the love

ಭದ್ರಾವತಿ : ನಗರದ ಹಿರಿಯ ಕಾರ್ಮಿಕ ಮುಖಂಡ, ಸಹಕಾರಿ ಧುರೀಣ ಹಾಗೂ ನಗರಸಭೆಯ ಮಾಜಿ ಸದಸ್ಯರಾದ ಕೆ.ಎನ್. ಭೈರಪ್ಪಗೌಡ (84) ಅವರು ಶುಕ್ರವಾರ ರಾತ್ರಿ ನಿಧನ ಹೊಂದಿದರು.

ಪತ್ನಿ, ಮೂವರು ಪುತ್ರಿಯರು, ಇಬ್ಬರು ಪುತ್ರರು, ಸೊಸೆ, ಅಳಿಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

ನಗರದ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದ ಅವರು, ಕಾರ್ಮಿಕ ಮುಖಂಡರಾಗಿ ಮತ್ತು ಸಹಕಾರಿ ಕ್ಷೇತ್ರದ ಧುರೀಣರಾಗಿ ಗುರುತಿಸಿಕೊಂಡಿದ್ದರು. ಹಳೇನಗರದ ಮಾಡೆಲ್ ಕೋ-ಅಪರೇಟಿವ್ ಹೌಸಿಂಗ್ ಸೊಸೈಟಿಯ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದ ಅವರು, ಸಹಕಾರಿ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗೆ ರಾಜ್ಯ ಸಹಕಾರ ಪ್ರಶಸ್ತಿಯನ್ನು ಪಡೆದಿದ್ದರು.

ಇವರ ನಿಧನಕ್ಕೆ ವಿಐಎಸ್‌ಎಲ್‌ನ ಕಾಯಂ ಹಾಗೂ ನಿವೃತ್ತ ಕಾರ್ಮಿಕರು, ಗುತ್ತಿಗೆ ಕಾರ್ಮಿಕರು, ವಿವಿಧ ಸಂಘ–ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು, ಗಣ್ಯರು ಹಾಗೂ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಸಂತಾಪ ಸೂಚಿಸಿದ್ದಾರೆ.

[pj-news-ticker]