ಆನಂದಪುರ: ಶಿಕಾರಿಪುರ ರಸ್ತೆಯ ಬೈರಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.
ಬೈರಾಪುರ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ಕಿಲೋ ಮೀಟರ್ ಬೋರ್ಡ್ ಗೆ ಬೈಕ್ ಸವಾರ ನಿಯಂತ್ರಣ ಕಳೆದು ಡಿಕ್ಕಿ ಹೊಡೆದಿದ್ದು ಪರಿಣಾಮ ತ್ಯಾಗರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಟೆ ಕೊಪ್ಪ ಗ್ರಾಮದ ನಿವಾಸಿ ರಮೇಶ್(55) ಎಂಬ ವ್ಯಕ್ತಿ ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ.
ಮೂಲತಃ ಕೃಷಿಕರಾಗಿದ್ದ ಇವರು ಶಿಕಾರಿಪುರದಿಂದ ಸ್ವಗ್ರಾಮ ಕೋಟೆಕೊಪ್ಪ ಗ್ರಾಮಕ್ಕೆ ತೆರಳುತ್ತಿರುವ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮೀಟರ್ ಬೋರ್ಡ್ ಗೆ ಢಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ.
ಅಪಘಾತದ ವಿಷಯ ತಿಳಿದ ಆನಂದಪುರ ಪೊಲೀಸ್ ಠಾಣೆಯ ಪಿಎಸ್ಐ ಪ್ರವೀಣ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
