Trending

ಶಿವಮೊಗ್ಗ ಡಿಸಿ ಹೆಸರಲ್ಲಿ ನಕಲಿ ವಾಟ್ಸಾಪ್‌ ಸಂದೇಶ : ವಂಚಕರಿಂದ ಜಾಗರೂಕರಾಗಿರಲು ಸೂಚನೆ

Spread the love

ಶಿವಮೊಗ್ಗ: ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿರುವ ಪ್ರಭುಲಿಂಗ ಕವಳಿಕಟ್ಟಿ ಅವರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಸೈಬರ್ ವಂಚಕರು ವಿದೇಶಿ ಸಂಖ್ಯೆಯಿಂದ ವಾಟ್ಸಾಪ್ ಸಂದೇಶಗಳನ್ನು ಕಳುಹಿಸುತ್ತಿರುವ ಬಗ್ಗೆ ಜಿಲ್ಲಾಧಿಕಾರಿಗಳೇ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳ ಹೆಸರು ಹಾಗೂ ಅವರ ಅಧಿಕೃತ ಭಾವಚಿತ್ರವನ್ನು ಬಳಸಿ, +84 56 455 2858 ಎಂಬ ವಿದೇಶಿ ವಾಟ್ಸಾಪ್ ಸಂಖ್ಯೆಯಿಂದ ಸಾರ್ವಜನಿಕರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ನಕಲಿ ಸಂದೇಶಗಳನ್ನು ರವಾನಿಸಲಾಗುತ್ತಿದೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಜಿಲ್ಲಾಧಿಕಾರಿಗಳು, ನಕಲಿ ಸಂದೇಶದ ಸ್ಕ್ರೀನ್‌ಶಾಟ್ ಅನ್ನು ಬಹಿರಂಗಪಡಿಸುವ ಮೂಲಕ ಅದರ ಸತ್ಯಾಸತ್ಯತೆಯನ್ನು ಸ್ಪಷ್ಟಪಡಿಸಿದ್ದಾರೆ.

ಈ ವಿದೇಶಿ ಸಂಖ್ಯೆಯಿಂದ ಬರುತ್ತಿರುವ ಎಲ್ಲ ಸಂದೇಶಗಳು ಸಂಪೂರ್ಣವಾಗಿ ಸೈಬರ್ ವಂಚಕರ ಕೃತ್ಯವಾಗಿದ್ದು, ಸಾರ್ವಜನಿಕರು ಹಾಗೂ ಸರ್ಕಾರಿ ಸಿಬ್ಬಂದಿಗಳು ಇಂತಹ ಸಂದೇಶಗಳಿಗೆ ಯಾವುದೇ ಕಾರಣಕ್ಕೂ ಪ್ರತಿಕ್ರಿಯಿಸಬಾರದು ಎಂದು ಅವರು ಮನವಿ ಮಾಡಿದ್ದಾರೆ. ಅಲ್ಲದೆ, ನಕಲಿ ವಾಟ್ಸಾಪ್ ಸಂಖ್ಯೆಗಳಿಂದ ಹಣದ ಬೇಡಿಕೆ ಅಥವಾ ಸಹಾಯ ಕೋರಿ ಸಂದೇಶಗಳು ಬಂದಲ್ಲಿ ಅವುಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿ, ತಕ್ಷಣವೇ ಆ ಸಂಖ್ಯೆಯನ್ನು ಬ್ಲಾಕ್ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.

[pj-news-ticker]