ಹೋದಲ್ಲೆಲ್ಲಾ ನೊಬೆಲ್ ಶಾಂತಿ ಪ್ರಶಸ್ತಿ ತನಗೆ ನೀಡಬೇಕು ಎಂದು ಲಾಭಿ ನಡೆಸುತ್ತಿದ್ದ ಟ್ರಂಪ್ ಹೋರಾಟಕ್ಕೆ ಇದೀಗ ಜಯ ದೊರಕಿದಂತಾಗಿದೆ.
2025 ರ ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಮಾರಿಯಾ ಕೊರಿನಾ ಮಚಾದೊ ಅವರು ವೆನೆಜುವೆಲಾದ “ಸ್ವಾತಂತ್ರ್ಯ ಹೋರಾಟ” ಕ್ಕೆ ನೀಡಿದ ಬೆಂಬಲಕ್ಕಾಗಿ ತಮ್ಮ ಪದಕವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಪ್ರದಾನ ಮಾಡಿದ್ದಾರೆ. ಟ್ರಂಪ್ ವೆನೆಜುವೆಲಾದ ವಿರೋಧ ಪಕ್ಷದ ನಾಯಕಿಗೆ ಧನ್ಯವಾದ ಅರ್ಪಿಸುತ್ತಾ, ಅವರನ್ನು ತುಂಬಾ ಅದ್ಭುತ ಮಹಿಳೆ ಎಂದು ಕರೆದರು.
ಶ್ವೇತಭವನದಲ್ಲಿ ನಡೆದ ಕಾರ್ಯಕ್ರದಲ್ಲಿ ಮಾರಿಯಾ ಕೊರಿನಾ ಮಚಾದೊ ಅವರು ತಮ್ಮ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಟ್ರಂಪ್ ಅವರಿಗೆ ಹಸ್ತಾಂತರ ಮಾಡಿದರು. ನೊಬೆಲ್ ಚಿನ್ನದ ಪದಕವು ಈಗ ಟ್ರಂಪ್ ಅವರ ಬಳಿಯೇ ಉಳಿದಿದೆ ಎಂದು ಶ್ವೇತಭವನದ ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ. ಕಾರ್ಯಕ್ರಮದ ಬಳಿಕ ಮಚಾದೊ ಚಿನ್ನದ ಪದಕವನ್ನು ಹಸ್ತಾಂತರಿಸಿದ್ದಾರೆ ಎಂದು ತಿಳಿದು ಬಂದಿದೆ.
ನಮ್ಮ ದೇಶದ ಸ್ವಾತಂತ್ರ್ಯಕ್ಕೆ ಅವರ ವಿಶಿಷ್ಟ ಬದ್ಧತೆಗೆ ಮನ್ನಣೆಯಾಗಿ ಅಮೆರಿಕದ ಅಧ್ಯಕ್ಷರಿಗೆ ನೊಬೆಲ್ ಶಾಂತಿ ಪ್ರಶಸ್ತಿಯ ಪದಕವನ್ನು ಪ್ರದಾನ ಮಾಡಿದ್ದೇನೆ ಮಚಾದೊ ತಿಳಿಸಿದ್ದಾರೆ.
ನೊಬೆಲ್ ಪ್ರಶಸ್ತಿ ಸಿಕ್ಕಿದ ನಂತರ ಮರಿಯಾ ಅವರು ಈ ಪ್ರಶಸ್ತಿಯನ್ನು ನಾನು ಟ್ರಂಪ್ ಅವರಿಗೆ ಅರ್ಪಿಸುವುದಾಗಿ ಅಕ್ಟೋಬರ್ 10 ರಂದೇ ಪ್ರಕಟಿಸಿದ್ದರು. ನೊಬೆಲ್ ಶಾಂತಿ ಪಾರಿತೋಷಕವು ಎಲ್ಲಾ ವೆನೆಜುವೆಲಾ ಜನರ ಹೋರಾಟಕ್ಕೆ ಸಿಕ್ಕ ಮನ್ನಣೆಯಾಗಿದೆ. ಈ ಪುಸ್ಕಾರವನ್ನ ವೆನೆಜುವೆಲಾದ ದುಃಖಿತ ಜನರು ಹಾಗೂ ಪ್ರಜಾಪ್ರಭುತ್ವಪರ ಚಳವಳಿಗೆ ನಿರ್ಣಾಯಕ ಬೆಂಬಲ ನೀಡಿದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಅರ್ಪಿಸುವುದಾಗಿ ತಿಳಿಸಿದ್ದರು.
