Trending

ಕೆಪಿಟಿಸಿಎಲ್ ಎಂಡಿ ಪಂಕಜ್ ಕುಮಾರ್ ಪಾಂಡೆಗೆ ಶೋಕಾಸ್ ನೋಟಿಸ್

Spread the love

ಬೆಂಗಳೂರು: ಮುಖ್ಯಮಂತ್ರಿಗಳ ಸೂಚನೆಗೆ ಸ್ಪಂದಿಸದೇ ನಿಗದಿತ ಸಮಯಕ್ಕೆ ಹಾಜರಾಗದ ಆರೋಪದ ಹಿನ್ನೆಲೆಯಲ್ಲಿ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿರುವ ಐಎಎಸ್ ಅಧಿಕಾರಿ ಪಂಕಜ್ ಕುಮಾರ್ ಪಾಂಡೆ ಅವರಿಗೆ ರಾಜ್ಯ ಸರ್ಕಾರ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನಿರ್ದೇಶನದ ಮೇರೆಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಈ ನೋಟಿಸ್ ನೀಡಿದ್ದು, ಗಂಭೀರ ಕರ್ತವ್ಯ ಲೋಪ ಹಾಗೂ ಶಿಸ್ತು ನಿಯಮಗಳ ಉಲ್ಲಂಘನೆ ಕುರಿತು ತಕ್ಷಣವೇ ಲಿಖಿತ ಸ್ಪಷ್ಟನೆ ನೀಡುವಂತೆ ಸೂಚಿಸಲಾಗಿದೆ.

ಜನವರಿ 20ರಂದು ಮಧ್ಯಾಹ್ನ 12.30ಕ್ಕೆ ಮುಖ್ಯಮಂತ್ರಿ ಭೇಟಿಗೆ ಸೂಚನೆ ನೀಡಲಾಗಿದ್ದರೂ, ಪಂಕಜ್ ಕುಮಾರ್ ಪಾಂಡೆ ಅವರು ನಿಗದಿತ ಸಮಯಕ್ಕೆ ಹಾಜರಾಗದೇ ಇದ್ದದ್ದು ಸರ್ಕಾರದ ಅಸಮಾಧಾನಕ್ಕೆ ಕಾರಣವಾಗಿದೆ. ಈ ವರ್ತನೆಯನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಮುಖ್ಯಮಂತ್ರಿಗಳ ಕರೆಯ ನಡುವೆಯೂ ಹಾಜರಾಗದೇ ಇರುವುದನ್ನು ಆಡಳಿತಾತ್ಮಕ ಶಿಸ್ತುಭಂಗವೆಂದು ಪರಿಗಣಿಸಲಾಗಿದ್ದು, ಇದೇ ಹಿನ್ನೆಲೆಯಲ್ಲಿ ಶೋಕಾಸ್ ನೋಟಿಸ್ ಜಾರಿಗೊಳಿಸಲಾಗಿದೆ. ನೋಟಿಸ್‌ಗೆ ತಕ್ಷಣ ಉತ್ತರ ನೀಡುವಂತೆ ಸೂಚಿಸಲಾಗಿದ್ದು, ಉತ್ತರ ತೃಪ್ತಿಕರವಾಗದಿದ್ದಲ್ಲಿ ಮುಂದಿನ ಶಿಸ್ತು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

[pj-news-ticker]