Trending

ಹೈದರಾಬಾದ್‌ನಲ್ಲಿ ಭೀಕರ ಅಗ್ನಿ ಅವಘಡ : ಇಬ್ಬರು ಮಕ್ಕಳು ಸೇರಿ ಐವರು ಮೃತ

Spread the love

ಹೈದರಾಬಾದ್: ತೆಲಂಗಾಣ ರಾಜಧಾನಿ ಹೈದರಾಬಾದ್‌ನ ನಾಂಪಲ್ಲಿ ಪ್ರದೇಶದಲ್ಲಿ ನಾಲ್ಕು ಅಂತಸ್ತಿನ ಪೀಠೋಪಕರಣ ಮಳಿಗೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಇಬ್ಬರು ಮಕ್ಕಳು ಸೇರಿ ಐವರು ಮೃತಪಟ್ಟಿದ್ದಾರೆ.

ಕಟ್ಟಡದ ಎರಡು ನೆಲಮಾಳಿಗೆಯಲ್ಲಿ ಹೆಚ್ಚಿನ ಪ್ರಮಾಣದ ಪೀಠೋಪಕರಣ ಸಂಗ್ರಹಿಸಲಾಗಿದ್ದು, ಅಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೆಲಮಾಳಿಗೆಯಿಂದ ಹರಡಿದ ದಟ್ಟವಾದ ಹೊಗೆಯಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ತೀವ್ರ ಅಡಚಣೆ ಎದುರಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಗೆ ಕಟ್ಟಡದ ಒಳಗೆ ಪ್ರವೇಶಿಸಲು ಕಷ್ಟವಾಗುತ್ತಿದೆ.

ದುರ್ಘಟನೆಯಲ್ಲಿ ಇಬ್ಬರು ಮಕ್ಕಳು ಹಾಗೂ ವೃದ್ಧ ಮಹಿಳೆ ಸೇರಿ ಐವರು ಮೃತಪಟ್ಟಿದ್ದು, ಮೃತದೇಹಗಳನ್ನು ನೆಲಮಾಳಿಗೆಯಿಂದ ಹೊರತೆಗೆಯಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಉಸಿರುಗಟ್ಟಿ ಸಾವಿಗೀಡಾಗಿರುವ ಸಾಧ್ಯತೆ ಇದೆ ಎನ್ನಲಾಗಿದ್ದು, ಮರಣೋತ್ತರ ಪರೀಕ್ಷೆಯ ಬಳಿಕ ಸಾವಿನ ನಿಖರ ಕಾರಣ ತಿಳಿಯಲಿದೆ.

ಅಗ್ನಿ ಅವಘಡಕ್ಕೆ ಕಾರಣ ಏನು ಎಂಬುದು ತನಿಖಾ ಹಂತದಲ್ಲಿದ್ದು, ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

[pj-news-ticker]