Trending

ಭದ್ರಾವತಿ : ವಿಟಮಿನ್‌ ಟ್ಯಾಬ್ಲೆಟ್‌ ಸೇವಿಸಿ ಮಕ್ಕಳಿಗೆ ಹೊಟ್ಟೆನೋವು : 53 ಮಕ್ಕಳು ಆಸ್ಪತ್ರೆಗೆ ದಾಖಲು

Spread the love

ಭದ್ರಾವತಿ : ಸರ್ಕಾರಿ ಶಾಲೆ ಮಕ್ಕಳಲ್ಲಿ ಏಕಾಏಕಿ ಹೊಟ್ಟೆನೋವು- ವಾಂತಿ ಕಾಣಿಸಿಕೊಂಡ ಪರಿಣಾಮ 53 ಮಕ್ಕಳು ಆಸ್ಪತ್ರೆಗೆ ದಾಖಲಾದ ಘಟನೆ ಅರಳೀಹಳ್ಳಿ ಸರ್ಕಾರಿ ಶಾಲೆಯಲ್ಲಿ ಮಂಗಳವಾರ ನಡೆದಿದೆ.

ಭದ್ರಾವತಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ಮಕ್ಕಳನ್ನು ದಾಖಲು ಮಾಡಲಾಗಿದೆ. ಮಧ್ಯಾಹ್ನ ಊಟದ ಬಳಿಕ ಮಕ್ಕಳಲ್ಲಿ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಊಟದ ಬಳಿಕ ಮಕ್ಕಳಿಗೆ ಶಿಕ್ಷಕರು ವಿಟಮಿನ್ & ಐರನ್ ಟ್ಯಾಬ್ಲೆಟ್ ವಿತರಿಸಿದ್ದರು. ಇದನ್ನು ನುಂಗಿದ ಬಳಿಕ ಮಕ್ಕಳು ಹೊಟ್ಟೆ ನೋವು ಎಂದು ವಾಂತಿ ಮಾಡಿಕೊಂಡಿದ್ದಾರೆ.

ತಕ್ಷಣವೇ ಶಿಕ್ಷಕರು ಮತ್ತು ಪೋಷಕರು ಮಕ್ಕಳನ್ನು ಭದ್ರಾವತಿ ತಾಲೂಕು ಆಸ್ಪತ್ರೆಗೆ ಕರೆತಂದಿದ್ದಾರೆ. ಚಿಕಿತ್ಸೆ ಮುಂದುವರಿದಿದ್ದು, ಮಕ್ಕಳಿಗೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಭದ್ರಾವತಿ ಬಿಇಓ ನಾಗೇಂದ್ರಪ್ಪ ಸ್ಥಳದಲ್ಲೇ ಬೀಡು ಬಿಟ್ಟು ಮಾಹಿತಿ ಪಡೆಯುತ್ತಿದ್ದಾರೆ.

[pj-news-ticker]