ಬೆಂಗಳೂರು: ಟೆಕ್ಕಿ ದಂಪತಿ ಟೀ ಕುಡಿಯಲು ಕೆಫೆಗೆ ಹೋದ ಸಮಯದಲ್ಲಿ ಮನೆಯ ಬೀಗ ಮುರಿದು ಸುಮಾರು 30 ಲಕ್ಷ ರೂ.ಗಳಿಗೂ ಅಧಿಕ ಮೌಲ್ಯದ ಚಿನ್ನ, ಬೆಳ್ಳಿ ಕಳ್ಳತನ ಮಾಡಿರುವ ಘಟನೆ ನಗರದ ಎಚ್ಆರ್ಬಿಆರ್ ಲೇಔಟ್ನಲ್ಲಿ ನಡೆದಿದೆ.
ದಂಪತಿ ಸಂಜೆ ಟೀ ಕುಡಿಯಲು ಕೆಫೆಗೆ ಹೋದಾಗ, ಕಳ್ಳರು ತೋರಿದ್ದಾರೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಚ್ಆರ್ಬಿಆರ್ ಲೇಔಟ್ 2ನೇ ಬ್ಲಾಕ್ನಲ್ಲಿರುವ ಬಾಲಾಜಿ (34) ಎಂಬುವವರ ಫ್ಲ್ಯಾಟ್ನಲ್ಲಿ ಶನಿವಾರ ಸಂಜೆ ಕಳ್ಳತನ ನಡೆದಿದೆ. ಇವರ ಮನೆ ಅಪಾರ್ಟ್ಮೆಂಟ್ನ ಮೂರನೇ ಮಹಡಿಯಲ್ಲಿದ್ದು, ದಪತಿ ಮನೆಗೆ ಬೀಗ ಹಾಕಿ ಟೀ ಕುಡಿಯೋಣ ಎಂದು ಹತ್ತಿರದ ಕೆಫೆಗೆ ಹೋಗಿದ್ದರು. ಸಂಜೆ 6.30ಕ್ಕೆ ಮನೆಗೆ ಮರಳಿದಾಗ, ಮುಖ್ಯ ಬಾಗಿಲಿನ ಬೀಗ ಮುರಿದಿರುವುದು ಗೊತ್ತಾಗಿದೆ.
ಒಳಗೆ ಹೋಗಿ ನೋಡಿದಾಗ ಬೆಡ್ರೂಮ್ನ ಕಪಾಟುಗಳು ತೆರೆದಿತ್ತು. ಅಲ್ಲಿದ್ದ ವಸ್ತುಗಳನ್ನು ಚೆಲ್ಲಾಪಿಲ್ಲಿಯಾಗಿದ್ದವು. ಈ ವೇಳೆ ಸುಮಾರು 250 ಗ್ರಾಂ ಚಿನ್ನದ ಆಭರಣಗಳು, ಪೂಜಾ ಕೋಣೆಯಲ್ಲಿದ್ದ 300 ಗ್ರಾಂ ಬೆಳ್ಳಿಯ ವಸ್ತುಗಳು ಹಾಗೂ ಇತರ ಬೆಲೆಬಾಳುವ ವಸ್ತುಗಳು ಕಳ್ಳತನ ಆಗಿವೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸರು, ಬೆರಳಚ್ಚು ತಜ್ಞರು, ವಿಧಿವಿಜ್ಞಾನದ ಜತೆಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
