Trending

ತಂದೆ, ತಾಯಿ, ತಂಗಿಯನ್ನು ಭೀಕರವಾಗಿ ಕೊಲೆಗೈದ ಯುವಕ

Spread the love

ವಿಜಯನಗರ: ತಂದೆ, ತಾಯಿ ಹಾಗೂ ಸಹೋದರಿಯನ್ನು ಯುವಕನೊಬ್ಬ ಭೀಕರವಾಗಿ ಹತ್ಯೆಗೈದಿರುವ ಘಟನೆ ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ನಡೆದಿದೆ. ಕುಟುಂಬದ ಮೂವರನ್ನೂ ಕೊಲೆ ಮಾಡಿದ ಬಳಿಕ ಆರೋಪಿ ಬೆಂಗಳೂರಿಗೆ ಪರಾರಿಯಾಗಿದ್ದಾನೆ.

ಬಳಿಕ ಆತನೇ ತಿಲಕನಗರ ಠಾಣೆಗೆ ತೆರಳಿ ತಂದೆ, ತಾಯಿ, ಸಹೋದರಿ ಮೂವರು ನಾಪತ್ತೆಯಾಗಿದ್ದಾರೆ ಎಂದು ದೂರು ನೀಡಿದ್ದ. ಆದರೆ, ವಿಚಾರಣೆ ವೇಳೆ ತಾನೇ ಮೂವರನ್ನು ಕೊಲೆಗೈದಿರುವುದಾಗಿ ಬಾಯಿಬಿಟ್ಟಿದ್ದಾನೆ.

ದೂರು ನೀಡಿದ ಯುವಕನನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ತಾನೇ ತಂದೆ, ತಾಯಿ, ಸಹೋದರಿ ಮೂವರನ್ನೂ ಕೊಲೆಗೈದು, ಮನೆಯೊಳಗೆ ಹೂತು ಹಾಕಿದ್ದಾಗಿ ಒಮ್ಮೆ ಹೇಳಿಕೆ ನೀಡಿದ್ದಾನೆ. ಮತ್ತೊಮ್ಮೆ ಸಂಡೂರಿನಲ್ಲಿ ಶವಗಳನ್ನು ಎಸೆದಿದ್ದಾಗಿ ಹೇಳಿದ್ದಾನೆ. ಹೀಗಾಗಿ ಮಗನೇ ಪೋಷಕರು ಹಾಗೂ ಸಹೋದರಿಯನ್ನು ಕೊಲೆಗೈದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಈ ಬಗ್ಗೆ ತಿಲಕನಗರ ಠಾಣೆ ಪೊಲೀಸರು ಕೊಟ್ಟೂರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಶವಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

[pj-news-ticker]