Trending

ಶಿವಮೊಗ್ಗ ಜಿಲ್ಲಾ ಪೊಲೀಸ್ ಸಿಬ್ಬಂದಿಗೆ ನೂತನ ‘ಬ್ಲೂ ಪಿ-ಕ್ಯಾಪ್’ ವಿತರಣೆ

Spread the love

ಶಿವಮೊಗ್ಗ: ಜಿಲ್ಲಾ ಪೊಲೀಸ್ ಇಲಾಖೆಯ ಕಾನ್ಸ್‌ಟೇಬಲ್ ಹಾಗೂ ಹೆಡ್ ಕಾನ್ಸ್‌ಟೇಬಲ್‌ಗಳಿಗೆ ಹೊಸ ವಿನ್ಯಾಸದ ‘ಬ್ಲೂ ಪಿ-ಕ್ಯಾಪ್’ಗಳನ್ನು ವಿತರಿಸಲಾಯಿತು.

ನಗರದ ಡಿಎಆರ್ ಪೊಲೀಸ್ ಕವಾಯತು ಮೈದಾನದಲ್ಲಿ ಇಂದು ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ನಿಖಿಲ್ ಬಿ., ಐಪಿಎಸ್ ಅವರು ಕ್ಯಾಪ್ ವಿತರಣೆಗೆ ಚಾಲನೆ ನೀಡಿದರು.

ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳು, ಜಿಲ್ಲಾ ಸಶಸ್ತ್ರ ಮೀಸಲು ಪಡೆ (DAR), ನಿಸ್ತಂತು ಘಟಕ ಹಾಗೂ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಈ ನೂತನ ಕ್ಯಾಪ್‌ಗಳನ್ನು ಹಸ್ತಾಂತರಿಸಲಾಯಿತು.

ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕಾರಿಯಪ್ಪ ಎ.ಜಿ (ಎಎಸ್‌ಪಿ-1), ರಮೇಶ್ ಕುಮಾರ್ ಎಸ್ (ಎಎಸ್‌ಪಿ-2) ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

[pj-news-ticker]