Trending

ರಾಹುಲ್ ಗಾಂಧಿಗೆ ಬಿಗ್ ರಿಲೀಫ್ : ಬಿಜೆಪಿ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ರದ್ದುಗೊಳಿಸಿದ ಹೈಕೋರ್ಟ್

Spread the love

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪ್ರಮುಖ ದಿನಪತ್ರಿಕೆಗಳಲ್ಲಿ “ಭ್ರಷ್ಟಾಚಾರ ರೇಟ್ ಕಾರ್ಡ್” ಜಾಹೀರಾತು ಪ್ರಕಟಿಸಿದ್ದಕ್ಕಾಗಿ ರಾಜ್ಯ ಬಿಜೆಪಿ ಘಟಕ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ರದ್ದುಗೊಳಿಸಿದೆ.

ಈ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಬಿಡುಗಡೆ ಮಾಡಿದ್ದ ‘ಕರಪ್ಶನ್ ರೇಟ್ ಕಾರ್ಡ್’ ಜಾಹೀರಾತನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಪರವಾಗಿ ಕೇಶವಪ್ರಸಾದ್ ಎಂಬುವವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಇದನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ, ಪ್ರಕರಣದ ಸ್ವರೂಪ ಮತ್ತು ದಾಖಲೆಗಳನ್ನು ಪರಿಗಣಿಸಿ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದ್ದಾರೆ.

[pj-news-ticker]