Trending

ಅರಸಾಳು – ಕುಂಸಿ ನಿಲ್ದಾಣಗಳಲ್ಲಿ ರೈಲು ನಿಲುಗಡೆ ವಿಸ್ತರಣೆ

Spread the love

ಶಿವಮೊಗ್ಗ: ಜಿಲ್ಲೆಯ ಅರಸಾಳು ಮತ್ತು ಕುಂಸಿ ರೈಲು ನಿಲ್ದಾಣಗಳಲ್ಲಿ ಕೆಲವು ಪ್ರಯಾಣಿಕ ರೈಲುಗಳ ನಿಲುಗಡೆ ಅವಧಿಯನ್ನು ಮತ್ತಷ್ಟು ಆರು ತಿಂಗಳ ಕಾಲ ವಿಸ್ತರಿಸಲಾಗಿದೆ.

ಪ್ರಯಾಣಿಕರ ಬೇಡಿಕೆ ಹಾಗೂ ಸಾರ್ವಜನಿಕರ ಅನುಕೂಲವನ್ನು ಗಮನದಲ್ಲಿಟ್ಟುಕೊಂಡು ಈ ತಾತ್ಕಾಲಿಕ ನಿಲುಗಡೆಯನ್ನು ಮುಂದುವರಿಸುವಂತೆ ರೈಲ್ವೆ ಇಲಾಖೆ ಆದೇಶ ಹೊರಡಿಸಿದೆ. ಇದರಿಂದ ಸ್ಥಳೀಯ ವಿದ್ಯಾರ್ಥಿಗಳು, ಉದ್ಯೋಗಿಗಳು ಹಾಗೂ ವ್ಯಾಪಾರಿಗಳಿಗೆ ಹೆಚ್ಚಿನ ಸೌಲಭ್ಯ ಲಭಿಸುವ ನಿರೀಕ್ಷೆಯಿದೆ.

ಪ್ರಯಾಣಿಕರ ಅನುಕೂಲಕ್ಕಾಗಿ, ರೈಲು ಸಂಖ್ಯೆ 16227/16228 ಮೈಸೂರು-ತಾಳಗುಪ್ಪ-ಮೈಸೂರು ಡೈಲಿ ಎಕ್ಸ್ ಪ್ರೆಸ್ ರೈಲಿನ ಅರಸಾಳು ನಿಲ್ದಾಣದ ನಿಲುಗಡೆ ಹಾಗೂ ರೈಲು ಸಂಖ್ಯೆ 16205/16206 ತಾಳಗುಪ್ಪ-ಮೈಸೂರು-ತಾಳಗುಪ್ಪ ಡೈಲಿ ಎಕ್ಸ್ ಪ್ರೆಸ್ ರೈಲುಗಳ ಅರಸಾಳು ಮತ್ತು ಕುಂಸಿ ನಿಲ್ದಾಣಗಳ ತಾತ್ಕಾಲಿಕ ನಿಲುಗಡೆಯನ್ನು ಇನ್ನೂ ಆರು ತಿಂಗಳ ಅವಧಿಗೆ ವಿಸ್ತರಿಸಲಾಗಿದೆ.

ಈ ನಿಲ್ದಾಣಗಳಲ್ಲಿ ರೈಲುಗಳ ನಿಲುಗಡೆಯು 2026ರ ಫೆಬ್ರವರಿ 24ರಿಂದ ಆಗಸ್ಟ್ 23ರವರೆಗೆ ಮುಂದುವರಿಯಲಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ವೇಳಾಪಟ್ಟಿಯಂತೆಯೇ ರೈಲುಗಳು ಈ ನಿಲ್ದಾಣಗಳಲ್ಲಿ ನಿಲ್ಲಲಿವೆ.

[pj-news-ticker]