Trending

ಏಪ್ರಿಲ್ 1ರಿಂದ ಟೋಲ್ ಗಳಲ್ಲಿ ನಗದು ಪಾವತಿಗೆ ಇಲ್ಲ ಅವಕಾಶ

Spread the love

ನವದೆಹಲಿ: ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾ ಸೇವೆಗಳಲ್ಲಿ ದಕ್ಷತೆ ಮತ್ತು ವಿಶ್ವಾಸಾರ್ಹತೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಏಪ್ರಿಲ್ 1ರಿಂದ ನಗದು ಪಾವತಿಗಳನ್ನು ಕೇಂದ್ರ ಸರ್ಕಾರವು ಸಂಪೂರ್ಣವಾಗಿ ಸ್ಥಗಿತಗೊಳಿಸಲಿದೆ.

ಟೋಲ್ ಪ್ಲಾಜಾಗಳಲ್ಲಿ ಸಂಪೂರ್ಣ ಡಿಜಿಟಲ್ ವ್ಯವಸ್ಥೆಯನ್ನು ಮಾಡಲಾಗುತ್ತದೆ. ಆದ್ದರಿಂದ ಏಪ್ರಿಲ್ 1ರಿಂದ ದೇಶದ ರಾಷ್ಟ್ರೀಯ ಹೆದ್ದಾರಿಗಳಲ್ಲಿರುವ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ವ್ಯವಸ್ಥೆ ಇರುವುದಿಲ್ಲ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ.

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಂಪೂರ್ಣ ಡಿಜಿಟಲ್ ಟೋಲಿಂಗ್ ಪರಿಸರ ವ್ಯವಸ್ಥೆಯನ್ನು ರಚಿಸುವ ಯೋಜನೆಯ ಭಾಗವಾಗಿ ಏಪ್ರಿಲ್ 1ರಿಂದ ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿ ಶುಲ್ಕ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗುತ್ತಿದೆ. ಇದು ಜಾರಿಯಾದ ಮೇಲೆ ಟೋಲ್ ಪ್ಲಾಜಾಗಳಲ್ಲಿ ಫಾಸ್ಟ್ ಟ್ಯಾಗ್ ಅಥವಾ ಏಕೀಕೃತ ಪಾವತಿ ಇಂಟರ್ಫೇಸ್ ನಂತಹ ಡಿಜಿಟಲ್ ವಿಧಾನಗಳ ಮೂಲಕ ಮಾತ್ರ ಪಾವತಿ ಪ್ರಕ್ರಿಯೆಯನ್ನು ಮಾಡಲಾಗುತ್ತದೆ.

ಟೋಲ್ ಪ್ಲಾಜಾಗಳಲ್ಲಿ ಸಂಪೂರ್ಣ ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ಅಳವಡಿಸುವ ಮೂಲಕ ಎಲೆಕ್ಟ್ರಾನಿಕ್ ಟೋಲ್ ಸಂಗ್ರಹ ಆದಾಯ ಹೆಚ್ಚಿಸಲು, ಶುಲ್ಕ ಪ್ಲಾಜಾ ಸೇವೆಯಲ್ಲಿ ದಕ್ಷತೆ ಮತ್ತು ವಿಶ್ವಾಸಾರ್ಹತೆ ವೃದ್ಧಿಸುವ ಗುರಿಯನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹೊಂದಿದೆ.

ಸಂಪೂರ್ಣ ಡಿಜಿಟಲ್ ಪಾವತಿ ವ್ಯವಸ್ಥಯ ಅಳವಡಿಕೆಯಿಂದ ಶುಲ್ಕ ಪ್ಲಾಜಾಗಳಲ್ಲಿ ದಟ್ಟಣೆಯನ್ನು ಕಡಿಮೆ ಮಾಡಿ ಟೋಲ್ ವಹಿವಾಟುಗಳಿಗೆ ಹೆಚ್ಚಿನ ಸ್ಥಿರತೆ ಮತ್ತು ಪಾರದರ್ಶಕತೆಯನ್ನು ತರಬಹುದು. ಇದರಿಂದ ಹೆದ್ದಾರಿ ಬಳಕೆದಾರರಿಗೆ ಪ್ರಯಾಣದಲ್ಲಿನ ಅಡೆತಡೆಗಳು ನಿವಾರಣೆಯಾಗುತ್ತದೆ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹೇಳಿದೆ.

[pj-news-ticker]