Trending

ಕಡಲೆಕಾಯಿ ಸಿಪ್ಪೆ ವಿಚಾರಕ್ಕೆ ಕೆಎಸ್ಆರ್ಟಿಸಿ ಬಸ್ನಲ್ಲಿ ಮಾರಾಮಾರಿ : ಮೂವರಿಗೆ ಗಾಯ

Spread the love

ಚಾಮರಾಜನಗರ : ಕಡಲೆಕಾಯಿ ಸಿಪ್ಪೆ ವಿಚಾರಕ್ಕೆ ಕೆಎಸ್ಆರ್ಟಿಸಿ ಬಸ್ನಲ್ಲಿ ಮಾರಾಮಾರಿ ನಡೆದಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಸರಗೂರು ಬಳಿ ನಡೆದಿದೆ.

ಕೊಳ್ಳೇಗಾಲದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ನಲ್ಲಿ ಪ್ರಯಾಣಿಕರು ಕಡಲೆಕಾಯಿ ಸಿಪ್ಪೆಯನ್ನು ಬಿಸಾಡಿದ್ದಾರೆ. ಇದನ್ನ ನಿರ್ವಾಹಕ ಪ್ರಶ್ನಿಸಿದ ವೇಳೆ ಮಾತಿಗೆ ಮಾತು ಬೆಳೆದ ಪರಿಣಾಮ, ಸರಗೂರು ಬೈಪಾಸ್ ಬಳಿ ನಿರ್ವಾಹಕ ಮತ್ತು ಪ್ರಯಾಣಿಕರ ನಡುವೆ ಬಡಿದಾಟವೇ ನಡೆದಿದೆ.

ಕ್ಷುಲ್ಲಕ ವಿಚಾರಕ್ಕೆ ಜಗಳ ನಡೆದ ಪರಿಣಾಮ ಚಾಮರಾಜನಗರದ ಪ್ರಯಾಣಿಕರಾದ ಫಯಾಜ್ ಅಹ್ಮದ್ ಮತ್ತು ಶಾರಾನ್, ನಿರ್ವಾಹಕ ಕನಕಪುರದ ಮುನಿಮಾದಯ್ಯಗೆ ಥಳಿಸಿದ್ದಾರೆ.

ಘಟನೆಯಲ್ಲಿ ಮೂವರೂ ಗಾಯಗೊಂಡಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಲಾಟೆ ನಡೆದ ಸ್ಥಳಕ್ಕೆ ಕೊಳ್ಳೇಗಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

[pj-news-ticker]