ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ಯುದ್ಧದ ಭೀತಿಯಲ್ಲಿ ಸಿಲುಕಿರುವ ಪ್ರವಾಸಿಗರಿಗೆ ಬಾಲಿವುಡ್ ನಟ ಸೋನು ಸೂದ್ ಅವರುಉಚಿತ ವಸತಿ ವ್ಯವಸ್ಥೆಯನ್ನು ನೀಡುವುದಾಗಿ ಹೇಳಿಕೊಂಡಿದ್ದಾರೆ.
ಇರಾನ್ ವಿರುದ್ಧ ಅಮೆರಿಕ ಮತ್ತು ಇಸ್ರೇಲ್ ಜಂಟಿ ಸೇನಾ ಕಾರ್ಯಾಚರಣೆ ಬಳಿಕ ಮಧ್ಯಪ್ರಾಚ್ಯ ಹಾಗೂ ಗಲ್ಫ್ ದೇಶಗಳಲ್ಲಿ ವಿಮಾನ ಸಂಚಾರ ಸ್ಥಗಿತಗೊಳಿಸಲಾಗಿದೆ.
ಇದರ ಪರಿಣಾಮ ಸಾವಿರಾರು ಪ್ರವಾಸಿಗರು ದುಬೈ, ಕುವೈತ್, ಸೇರಿದಂತೆ ಅನೇಕ ಕಡೆಗಳಲ್ಲಿ ಸಿಲುಕಿಕೊಂಡಿದ್ದಾರೆ.
ಇದೀಗ, ಮಧ್ಯಪ್ರಾಚ್ಯದಲ್ಲಿ ಸಿಲುಕಿರುವ ಪ್ರವಾಸಿಗರಿಗೆ ಉಚಿತ ವಸತಿ ಕಲ್ಪಿಸುವುದಾಗಿ ಸೋನು ಸೂದ್ ಅವರುಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ನೀಡಿದ್ದಾರೆ. ‘ಯುದ್ಧದ ಭೀತಿಯಲ್ಲಿ ಸಿಲುಕಿ ಊಟ, ವಸತಿಗಾಗಿ ಪರದಾಡುತ್ತಿರುವವರಿಗೆ ನಮ್ಮ ತಂಡದಿಂದ ಉಚಿತ ವಸತಿ ವ್ಯವಸ್ಥೆ ಮಾಡಿಕೊಳ್ಳುತ್ತೇವೆ. ಈ ವ್ಯವಸ್ಥೆ ಭಾರತೀಯರಿಗೆ ಮಾತ್ರವಲ್ಲದೆ ವಿದೇಶಿ ಪ್ರವಾಸಿಗರಿಗೂ ನೀಡಲಾಗುತ್ತದೆ’ ಎಂದು ಹೇಳಿಕೊಂಡಿದ್ದಾರೆ.
