Trending

ಮಹಿಳಾ ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್ – 90 ದಿನಗಳ ಮಾತೃತ್ವ ರಜೆ ಘೋಷಣೆ

Spread the love

ಬೆಂಗಳೂರು : ಕರ್ನಾಟಕದ 2026–27ನೇ ಸಾಲಿನ ಬಜೆಟ್ ಮಂಡನೆಯ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಿಳಾ ಅತಿಥಿ ಉಪನ್ಯಾಸಕರಿಗೆ ಮಹತ್ವದ ಘೋಷಣೆ ಮಾಡಿದ್ದಾರೆ.

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಪಾಲಿಟೆಕ್ನಿಕ್ ಹಾಗೂ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನಗಳ ಮಾತೃತ್ವ ರಜೆ ಸೌಲಭ್ಯವನ್ನು ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ರಜೆ ಸೌಲಭ್ಯವನ್ನು ಮುಂದಿನ ಶೈಕ್ಷಣಿಕ ಸಾಲಿನಿಂದ ಜಾರಿಗೆ ತರಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಈ ಕ್ರಮದಿಂದ ರಾಜ್ಯದ ಸಾವಿರಾರು ಮಹಿಳಾ ಅತಿಥಿ ಉಪನ್ಯಾಸಕರಿಗೆ ನೆರವಾಗಲಿದೆ. ಇದುವರೆಗೆ ಅತಿಥಿ ಉಪನ್ಯಾಸಕರಿಗೆ ಮಾತೃತ್ವ ರಜೆಯ ಕುರಿತು ಸ್ಪಷ್ಟ ಸೌಲಭ್ಯ ಇರಲಿಲ್ಲ ಎಂಬ ಕಾರಣದಿಂದ ಹಲವು ಮಹಿಳಾ ಉಪನ್ಯಾಸಕರು ಸಮಸ್ಯೆ ಎದುರಿಸುತ್ತಿದ್ದರು.

ಇದೀಗ ಸರ್ಕಾರ ಈ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಮಹತ್ವದ ನಿರ್ಧಾರ ಕೈಗೊಂಡಿದೆ. ಮುಂದಿನ ಶೈಕ್ಷಣಿಕ ವರ್ಷದಿಂದಲೇ ಈ 90 ದಿನಗಳ ಮಾತೃತ್ವ ರಜೆ ಸೌಲಭ್ಯ ಜಾರಿಗೆ ಬರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಭಾಷಣದಲ್ಲಿ ಘೋಷಿಸಿದ್ದಾರೆ.

ಇದರ ಮೂಲಕ ಮಹಿಳಾ ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಮತ್ತು ಕುಟುಂಬದ ಜವಾಬ್ದಾರಿಗಳನ್ನು ಸಮತೋಲನಗೊಳಿಸಲು ಸಹಕಾರವಾಗಲಿದೆ ಎಂದು ಸರ್ಕಾರ ತಿಳಿಸಿದೆ.

[pj-news-ticker]