Trending

ಸಿಎಂ ಬದಲಾವಣೆ ವಿಚಾರ : ಬಜೆಟ್‌ ಬೆನ್ನಲ್ಲೇ ಶಾಕಿಂಗ್‌ ಹೇಳಿಕೆ ನೀಡಿದ ಸಿದ್ದರಾಮಯ್ಯ

Spread the love

ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಚರ್ಚೆ ಜೋರಾಗಿರುವ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಕಿಂಗ್‌ ಹೇಳಿಕೆ ನೀಡಿದ್ದಾರೆ.

ಈ ಮೊದಲು ಪೂರ್ಣಾವಧಿಯಾಗಿ ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುವೆ ಎಂದು ಹೇಳುತ್ತಿದ್ದ ಸಿಎಂ ಸಿದ್ದರಾಮಯ್ಯ ಅವರು ಇದೀಗ, ಹೈಕಮಾಂಡ್‌ ಅವಕಾಶ ಕೊಟ್ಟರೆ ಮುಂದುವರಿಯುತ್ತೇನೆ ಎಂದು ಹೇಳಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ವರುಣಾ ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ತೆರಳಿದ ವೇಳೆ ಮಾಧ್ಯಮಗಳ ಜತೆ ಅವರು ಮಾತನಾಡಿದ್ದಾರೆ. ಈ ವೇಳೆ ಇನ್ನೆರಡು ಬಜೆಟ್‌ ನೀವೇ ಮಂಡಿಸುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಅವರು, ನಾನು 17ನೇ ಬಜೆಟ್‌ ಮಂಡಿಸಿದ್ದೇನೆ. ಕರ್ನಾಟಕದಲ್ಲಿ ಇದೇ ಅತಿ ಹೆಚ್ಚು. ಹೈಕಮಾಂಡ್‌ ಅವಕಾಶ ಕೊಟ್ಟರೆ ಇನ್ನೆರಡು ಬಜೆಟ್‌ ಮಂಡಿಸುತ್ತೇನೆ.

ರೆಕಾರ್ಡ್‌ ಮುರಿಯುವುದು ಮುಖ್ಯವಲ್ಲ. ಹೈಕಮಾಂಡ್‌ ಬಿಡು ಅಂದ್ರೆ ಬಿಡ್ತೀನಿ, ಮುಂದುವರಿಯಿರಿ ಎಂದರೆ ಮುಂದುವರಿಯುತ್ತೇನೆ. ಅಂತಿಮವಾಗಿ ಹೈಕಮಾಂಡ್‌ ಏನು ತೀರ್ಮಾನ ಮಾಡುತ್ತದೋ ಅದಕ್ಕೆ ನಾನು ಬದ್ಧ ಎಂದು ತಿಳಿಸಿದ್ದಾರೆ.

[pj-news-ticker]