Trending

ಹಾಸ್ಟೆಲ್​ನಲ್ಲಿ ವಿದ್ಯಾರ್ಥಿಯಿಂದ ಹಲವರ ಮೇಲೆ ಹಲ್ಲೆ, ಓರ್ವ ಬಾಲಕ ಸಾವು, ವಾರ್ಡನ್‌ಗೆ ಗಾಯ

Spread the love

ಬಳ್ಳಾರಿ: ಇತ್ತೀಚೆಗೆ ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ಬಾಲಕನ ಕೊಲೆ ಪ್ರಕರಣ ಮಾಸುವ ಮುನ್ನವೇ ಬಳ್ಳಾರಿಯಲ್ಲಿಯೂ ಅಂತಹುದೇ ಪ್ರಕರಣ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯಲ್ಲಿ ಓರ್ವ ಬಾಲಕ ಮೃತಪಟ್ಟಿರುವ ಘಟನೆ ಬಳ್ಳಾರಿಯ ಖಾಸಗಿ ಶಾಲೆಗೆ ಸೇರಿದ ಹಾಸ್ಟೆಲ್​ನಲ್ಲಿ ನಡೆದಿದೆ.

ಹಾಸ್ಟೆಲ್​​ನ ವಾರ್ಡನ್​​ ಸೇರಿ ಹಲವು ಬಾಲಕರ ಮೇಲೆ 9ನೇ ತರಗತಿ ವಿದ್ಯಾರ್ಥಿ ರಾಡ್​​ನಿಂದ ಹಲ್ಲೆ ನಡೆಸಿದ ಪರಿಣಾಮ ಓರ್ವ ಪ್ರಾಣಬಿಟ್ಟಿದ್ದರೆ, ಇತರ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಹಲ್ಲೆ ನಡೆಸಿ ಬಾಲಕ ಪರಾರಿಯಾಗಿದ್ದು, ಗಾಯಾಳುಗಳನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಇನ್ನು ಘಟನೆಯಲ್ಲಿ ಮೃತ ಬಾಲಕನ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ರಾಡ್​ನಿಂದ ಹೊಡೆದಿದ್ದಾನೆ ಎಂದು ಶಾಲಾ ಆಡಳಿತ ಮಂಡಳಿ ಹೇಳ್ತಿದೆ. ಆದರೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಅನುಮಾನ ಇದೆ. ಹಲ್ಲೆ ನಡೆಸಿರುವ ವಿದ್ಯಾರ್ಥಿ ಡ್ರಗ್​ ಅಡಿಕ್ಟ್ ಆಗಿರುವ ಶಂಕೆ ಇದ್ದು, ಇಷ್ಟೆಲ್ಲ ಹುಡುಗರ ಮೇಲೆ ಆತ ಒಬ್ಬನೇ ಹಲ್ಲೆ ಮಾಡೋದಕ್ಕೆ ಹೇಗೆ ಸಾಧ್ಯ? ಇದಕ್ಕೆಲ್ಲಾ ಶಾಲಾ ಆಡಳಿತ ಮಂಡಳಿಯೇ ನೇರ ಹೊಣೆ ಎಂದು ಮೃತ ವಿದ್ಯಾರ್ಥಿ ಪೋಷಕರು ಆರೋಪಿಸಿದ್ದಾರೆ.

ಹಾಸ್ಟೆಲ್​ ಬಳಿ ಮೃತ ವಿದ್ಯಾರ್ಥಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

[pj-news-ticker]