ಬೆಂಗಳೂರು: ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ ಅವರ ಪಿಎ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಉಪ್ಪಾರಪೇಟೆ ಬಳಿಯ ಲಾಡ್ಜ್ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಮೃತರನ್ನು ದಾವಣಗೆರೆ ಮೂಲದ ಶಿವಕುಮಾರ್ ಎಂದು ಗುರುತಿಸಲಾಗಿದೆ.
ಮೃತ ಶಿವಕುಮಾರ್ ಮೈ ತುಂಬಾ ಸಾಲ ಮಾಡಿಕೊಂಡಿದ್ದರು. ಕೆಲ ದಿನಗಳ ಹಿಂದೆಯಷ್ಟೇ ಕೆಲಸದಿಂದ ತೆಗೆಯಲಾಗಿತ್ತು. ಘಟನೆ ನಡೆದ ದಿನ ಹೆಂಡತಿಗೆ ವಿಡಿಯೊ ಕಾಲ್ ಮಾಡಿ, ನನಗೆ ಜೀವನ ಸಾಕಾಗಿದೆ, ಸಾಯುತ್ತೀನಿ ಎಂದು ಹೇಳಿ ಲಾಡ್ಜ್ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಸದ್ಯ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಯುಡಿಆರ್ (ಅಸ್ವಾಭಾವಿಕ ಸಾವು) ಪ್ರಕರಣ ದಾಖಲಾಗಿದೆ.
