Trending

ಏಪ್ರಿಲ್‌ 9ಕ್ಕೆ ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರದ ಉಪ ಚುನಾವಣೆ : ಮೇ 4ಕ್ಕೆ ಫಲಿತಾಂಶ

Spread the love

ಬೆಂಗಳೂರು: ರಾಜ್ಯದಲ್ಲಿ ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರದ ಉಪ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ಏಪ್ರಿಲ್‌ 9ಕ್ಕೆ ಈ ಎರಡು ಕ್ಷೇತ್ರಗಳಿಗೆ ಬೈ ಎಲೆಕ್ಷನ್‌ ನಡೆಯಲಿದ್ದು, ಮೇ 4ಕ್ಕೆ ಫಲಿತಾಂಶ ಪ್ರಕಟವಾಗಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದೆ.

ಹಿರಿಯ ಕಾಂಗ್ರೆಸ್‌ ಶಾಸಕ ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರ ಮತ್ತು ಹಿರಿಯ ಕೈ ಶಾಸಕ ಎಚ್‌.ವೈ.ಮೇಟಿ ನಿಧನದಿಂದ ತೆರವಾದ ಬಾಗಲಕೋಟೆ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯಲಿದೆ.

ಈ ಎರಡೂ ಕ್ಷೇತ್ರಗಳಲ್ಲಿ ಟಿಕೆಟ್‌ಗಾಗಿ ಪೈಪೋಟಿ ಜೋರಾಗಿದೆ. ದಾವಣಗೆರೆ ದಕ್ಷಿಣಕ್ಕೆ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂಬುವುದು ಕಾಂಗ್ರೆಸ್ ಮುಸ್ಲಿಂ ಮುಖಂಡರ ಬೇಡಿಕೆಯಾಗಿದೆ. ಆದರೆ ಇದಕ್ಕೆ ಸಚಿವ ಎಸ್.ಎಸ್. ಮಲ್ಲಕಾರ್ಜುನ ಅವರು ವಿರೋಧ ವ್ಯಕ್ತಪಡಿಸಿದ್ದಾರೆ.

ಇನ್ನು ಬಿಜೆಪಿಯಲ್ಲೂ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಸಂಬಂಧಿಸಿ ಪೈಪೋಟಿ ಇದೆ. ಜಿಎಸ್ ಸಿದ್ದೇಶ್ವರ ಮತ್ತು ಎಂಪಿ ರೇಣುಕಾಚಾರ್ಯ ಬಣಗಳ ನಡುವೆ ಟಿಕೆಟ್‌ಗಾಗಿ ಪೈಪೋಟಿ ಇದೆ. ಈ ಭಿನ್ನಮತದ ಹಿನ್ನೆಲೆಯಲ್ಲಿ ಪ್ರತ್ಯೇಕ ಸಭೆಗಳು ನಡೆದಿವೆ.

[pj-news-ticker]