Trending

ಎಲ್‌ಪಿಜಿ ಗ್ರಾಹಕರಿಗೆ ಬಯೊಮೆಟ್ರಿಕ್ ದೃಢೀಕರಣ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ

Spread the love

ನವದೆಹಲಿ: ಗೃಹಬಳಕೆಯ ಅಡುಗೆ ಅನಿಲ ಸರಬರಾಜಿನಲ್ಲಿ ದುರುಪಯೋಗವನ್ನು ತಡೆಗಟ್ಟಲು ಮತ್ತು ವಿತರಣೆಯನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ. ಗ್ರಾಹಕರಿಗೆ ಬಯೊಮೆಟ್ರಿಕ್ ಆಧಾರ್ ಇ-ಕೆವೈಸಿಯನ್ನು ಕಡ್ಡಾಯಗೊಳಿಸಿದೆ.

ದೇಶದ ಎಲ್ಲಾ ಎಲ್‌ಪಿಜಿ ಗ್ರಾಹಕರು ತಮ್ಮ ಬಯೊಮೆಟ್ರಿಕ್ ಆಧಾರ್ ದೃಢೀಕರಣವನ್ನು (e-KYC) ಪೂರ್ಣಗೊಳಿಸುವುದು ಕಡ್ಡಾಯ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ತಿಳಿಸಿದೆ.

ಈ ಕುರಿತು, ‘ಎಲ್ಲಾ ಗ್ರಾಹಕರು ಬಯೊಮೆಟ್ರಿಕ್ ಆಧಾರ್ ದೃಢೀಕರಣವನ್ನು (e-KYC) ಪೂರ್ಣಗೊಳಿಸಬೇಕಾಗುತ್ತದೆ. ಈಗ ನಿಮ್ಮ ಮನೆಯಿಂದಲೇ ತೈಲ ಕಂಪನಿಯ ಮೊಬೈಲ್ ಆಯಪ್‌ ಮತ್ತು ಆಧಾರ್ ಫೇಸ್‌ಆರ್‌ಡಿ ಅಪ್ಲಿಕೇಶನ್ ಬಳಸಿ’ ಎಂದು ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

[pj-news-ticker]