Trending

ಶಿವಮೊಗ್ಗ ವಿಮಾನ ನಿಲ್ದಾಣದೊಳಗೆ ನುಗ್ಗಿದ ಕರಡಿ : ಕೊನೆಗೂ ಸೆರೆ

Spread the love

ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣದೊಳಗೆ ನುಗ್ಗಿ ಆತಂಕ ಮೂಡಿಸಿದ್ದ ಕರಡಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಹಿಡಿಯುವಲ್ಲಿ ಯಶಸ್ವಿಯಾದ ಘಟನೆ ಸೋಮವಾರ ನಡೆದಿದೆ.

ವಿಮಾನ ನಿಲ್ದಾಣದ ಸುತ್ತಮುತ್ತ ಗ್ರಾಮಗಳಲ್ಲಿ ಕರಡಿ ಕೆಲ ದಿನಗಳಿಂದ ಕಾಣಿಸಿಕೊಂಡಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಹುಡುಕಾಡುತ್ತಿರುವ ವೇಳೆ ಪೊದೆಯಿಂದ ಜಿಗಿದು ಏರ್‌ಪೋರ್ಟ್‌ ಕಾಂಪೌಂಡ್‌ ಒಳಗೆ ಹಾರಿ ಪೊದೆಯೊಳಗೆ ಸೇರಿಕೊಂಡಿತ್ತು. ಇದೀಗ ಅರಣ್ಯ ಇಲಾಖೆ ಅರವಳಿಕೆ ನೀಡಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಸೋಮವಾರ ಬೆಳಗ್ಗೆ ವಿಮಾನ ನಿಲ್ದಾಣದ ಪಕ್ಕದ ವಿನಾಯಕ ನಗರ, ಜ್ಯೋತಿ ನಗರದಲ್ಲಿ ಕರಡಿ ಕಾಣಿಸಿಕೊಂಡಿತ್ತು. ಅಲ್ಲಿನ ಮನೆಗಳು, ತೋಟಗಳ ಪಕ್ಕದಲ್ಲಿ ಕರಡಿ ಓಡಾಡಿದೆ. ಸ್ಥಳೀಯರು ಇದರ ವಿಡಿಯೋ ಚಿತ್ರೀಕರಣ ಮಾಡಿಕೊಂಡು ಅರಣ್ಯ ಇಲಾಖೆಗೆ ಮಾಹಿತಿ ಮುಟ್ಟಿಸಿದ್ದರು.

[pj-news-ticker]