Trending

ಡ್ರಿಂಕ್ & ಡ್ರೈವ್‌ ತಪಾಸಣೆಯಲ್ಲಿ ಸಿಕ್ಕಿಬಿದ್ದ ಡ್ರೈವರ್ ಲಾರಿಯಲ್ಲೇ ನೇಣಿಗೆ ಶರಣು

Spread the love

ಬೆಂಗಳೂರು : ಚಾಲಕನೋರ್ವ ಲಾರಿಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಜೆ.ಪಿ.ನಗರದಲ್ಲಿ ನಡೆದಿದೆ.

ಷಣ್ಮುಗ ಮೃತ ಲಾರಿ ಚಾಲಕ. ಪೊಲೀಸರು ಡ್ರಿಂಗ್ ಆ್ಯಂಡ್ ಡ್ರೈವ್‌ ತಪಾಸಣೆ ವೇಳೆ ಷಣ್ಮುಗ ಮದ್ಯಪಾನ ಮಾಡಿರುವುದು ಪತ್ತೆಯಾಗಿದೆ. ಹೀಗಾಗಿ ಪೊಲೀಸರು, ಚಾಲಕ ಷಣ್ಮುಗಗೆ ದಂಡ ವಿಧಿಸಿ ಬಳಿಕ ಲಾರಿಯನ್ನು ಜೆ.ಪಿ.ನಗರ ಠಾಣೆಗೆ ಎಳೆದೊಯ್ದಿದ್ದಾರೆ.

ಆದ್ರೆ, ಷಣ್ಮುಗ ಠಾಣೆಯ ಬಳಿ ನಿಲ್ಲಿಸಿದ್ದ ಲಾರಿಯಲ್ಲೇ ನೇಣು ಬಿಗಿದುಕೊಂಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಘಟನೆಯಿಂದ ಮನನೊಂದು ಚಾಲಕ, ತಡರಾತ್ರಿ ಈ ದುರಂತ ನಿರ್ಧಾರ ಕೈಗೊಂಡಿರಬಹುದು ಎಂದು ಶಂಕಿಸಲಾಗಿದೆ.

ನಿನ್ನೆ (ಏಪ್ರಿಲ್ 04) ರಾತ್ರಿ ಜೆಪಿ ನಗರ ಪೊಲೀಸರು ಸಂಚಾರ ನಿಯಮ ಉಲ್ಲಂಘನೆ ಹಾಗೂ ಮದ್ಯಪಾನ ಮಾಡಿ ವಾಹನ ಚಲಾಯಿಸುವವರ ವಿರುದ್ಧ ವಿಶೇಷ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಲಾರಿ ಚಾಲಕ ಷಣ್ಮುಗ ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿರುವುದು ಪೊಲೀಸರಿಗೆ ಅನುಮಾನ ಬಂದಿದೆ. ಕೂಡಲೇ ಆತನನ್ನು ತಡೆದ ಪೊಲೀಸರು ಬ್ರೀತ್ ಅನಲೈಸರ್ ಮೂಲಕ ತಪಾಸಣೆ ನಡೆಸಿದಾಗ ಮದ್ಯಪಾನ ಮಾಡಿರುವುದು ದೃಢಪಟ್ಟಿದೆ.

ಇದಾದ ನಂತರ ಪೊಲೀಸರು ನಿಯಮದಂತೆ ಷಣ್ಮುಗನಿಗೆ ಭಾರೀ ಮೊತ್ತದ ದಂಡ ವಿಧಿಸಿದ್ದಾರೆ. ಅಲ್ಲದೆ, ಮದ್ಯದ ಅಮಲಿನಲ್ಲಿದ್ದ ಚಾಲಕನಿಗೆ ವಾಹನ ಚಲಾಯಿಸಲು ಬಿಡದ ಪೊಲೀಸರು, ಲಾರಿಯನ್ನು ವಶಕ್ಕೆ ಪಡೆದು ಜೆಪಿ ನಗರ ಪೊಲೀಸ್ ಠಾಣೆಗೆ ಎಳೆದೊಯ್ದಿದ್ದರು. ಆದ್ರೆ, ಚಾಲಕ ಷಣ್ಮುಗ ಅದೇ ಲಾರಿಯಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ.

ಮದ್ಯಪಾನದ ಅಮಲು ಹಾಗೂ ಪೊಲೀಸರು ದಂಡ ಹಾಕಿದದ್ದರಿಂದ ಮನನೊಂದು ತಡರಾತ್ರಿ ಲಾರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಇಂದು (ಏಪ್ರಿಲ್ 05) ಬೆಳಿಗ್ಗೆ ಲಾರಿಯೊಳಗೆ ಚಾಲಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಜೆ.ಪಿ.ನಗರ ಪೊಲೀಸ್ ಠಾಣೆಯಲ್ಲಿ UDR ಕೇಸ್ ದಾಖಲಾಗಿದೆ.

[pj-news-ticker]