Trending

ಭದ್ರಾವತಿಯಲ್ಲಿ ಜಗಜೀವನರಾಮ್ ಜಯಂತಿ – ಎಲ್ಲರಿಗೂ ಮಾದರಿಯಾದ ನಾಯಕನಿಗೆ ಗೌರವ

Spread the love

ಭದ್ರಾವತಿ: ದೇಶದ ಹಸಿರು ಕ್ರಾಂತಿಯ ಹರಿಕಾರ ಮತ್ತು ಮಾಜಿ ಉಪ ಪ್ರಧಾನಿಯಾದ ಡಾ. ಬಾಬು ಜಗಜೀವನರಾಮ್‌ ಅವರ ೧೧೯ನೇ ಜಯಂತಿಯನ್ನು ಭದ್ರಾವತಿಯಲ್ಲಿ ಭಾನುವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು. ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ನಗರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಉಪನ್ಯಾಸಕ ಡಾ. ಕೆ.ಎಚ್ ಕುಮಾರಸ್ವಾಮಿ, ಜಗಜೀವನರಾಮ್ ಅವರು ಕೇವಲ ಒಂದು ಸಮುದಾಯದ ನಾಯಕನಲ್ಲ, ದೇಶದ ಸಮಗ್ರ ಅಭಿವೃದ್ಧಿಗೆ ದುಡಿದ ಮಹಾನ್ ನಾಯಕ ಎಂದು ಬಣ್ಣಿಸಿದರು.

ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದ ಜಗಜೀವನರಾಮ್ ಅವರು, ನಂತರ ದೇಶದ ನಿರ್ಮಾಣದಲ್ಲೂ ಮಹತ್ವದ ಪಾತ್ರವಹಿಸಿದರು. ಸಂವಿಧಾನ ರಚನೆ ಸಂದರ್ಭದಲ್ಲಿ ಡಾ. ಬಿ.ಆರ್ ಅಂಬೇಡ್ಕರ್‌ರವರ  ಚಿಂತನೆಗಳಿಗೆ ಬೆಂಬಲ ನೀಡಿ, ದೇಶದ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ರೂಪಿಸಿದರು ಎಂದು ವಿವರಿಸಿದರು.

ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜಕುಮಾರ್ ಹಾಗೂ ಹಿರಿಯ ಸದಸ್ಯ ಬಿ.ಕೆ ಮೋಹನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಶಾಸಕ ಬಿ.ಕೆ ಸಂಗಮೇಶ್ವರ್, ತಹಸೀಲ್ದಾರ್ ಪರುಸಪ್ಪ ಕುರುಬರ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಂ. ಆಶಾಲತ, ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್, ಪೌರಾಯುಕ್ತ ಕೆ.ಎನ್ ಹೇಮಂತ್, ಸದಸ್ಯರಾದ ಚನ್ನಪ್ಪ, ಬಸವರಾಜ ಬಿ. ಆನೇಕೊಪ್ಪ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ,

ದಲಿತ ಮುಖಂಡರಾದ ಶಿವಬಸಪ್ಪ, ಬಿ.ಎ ಮಂಜುನಾಥ್, ವಿ. ವಿನೋದ್, ಎಂ. ಶಿವಕುಮಾರ್, ನಾಗರಾಜ್, ಶಿವಪ್ಪ, ರಾಜೇಂದ್ರ, ಮಂಜುಳ ರಾಮಚಂದ್ರ, ಪುಟ್ಟರಾಜ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಕೆ.ಜಿ ಶಿವಕುಮಾರ್,ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಶಶಿಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

[pj-news-ticker]