Trending

ಮಲೆನಾಡಿನಲ್ಲಿ ಮಂಗನ ಕಾಯಿಲೆ ಮತ್ತೆ ಅಬ್ಬರ – ಸಾಗರ ತಾಲೂಕಿನಲ್ಲಿ ವ್ಯಕ್ತಿ ಸಾವು

Spread the love

 ಸಾಗರ : ಮಲೆನಾಡು ಭಾಗದಲ್ಲಿ ಮತ್ತೆ ಮಂಗನ ಕಾಯಿಲೆ ಹರಡುವ ಆತಂಕ ಹೆಚ್ಚಾಗಿದೆ. ಸಾಗರ ತಾಲೂಕು ವ್ಯಾಪ್ತಿಯಲ್ಲಿ ಈ ಮಾರಕ ಕಾಯಿಲೆಗೆ ವ್ಯಕ್ತಿಯೊಬ್ಬರು ಬಲಿಯಾಗಿರುವುದು ದೃಢಪಟ್ಟಿದೆ.

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕುದ ಮನ್ಮನೆ ಗ್ರಾಮದ ನಿವಾಸಿ ಮಂಜಪ್ಪ (65) ಮೃತಪಟ್ಟವರು. ಅವರು ಕಳೆದ ಕೆಲವು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರು.

ಆರಂಭದಲ್ಲಿ ಅವರನ್ನು ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಅಲ್ಲಿನ ರಕ್ತ ಪರೀಕ್ಷೆಯಲ್ಲಿ ಮಂಗನ ಕಾಯಿಲೆ ಸೋಂಕು ತಗುಲಿರುವುದು ದೃಢಪಟ್ಟಿತ್ತು. ನಂತರ ಸೋಂಕಿನ ತೀವ್ರತೆ ಹೆಚ್ಚಾದ ಹಿನ್ನೆಲೆಯಲ್ಲಿ, ವೈದ್ಯರ ಸಲಹೆಯಂತೆ ಅವರನ್ನು ಮಣಿಪಾಲ ಆಸ್ಪತ್ರೆಗೆ ರವಾನಿಸಲಾಯಿತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಬೆಳಿಗ್ಗೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಮಲೆನಾಡು ಭಾಗದಲ್ಲಿ ಕಾಡು ಪ್ರದೇಶಗಳಿಗೆ ಸಮೀಪ ಇರುವ ಗ್ರಾಮಗಳಲ್ಲಿ ಈ ಕಾಯಿಲೆ ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತದೆ. ಇದು ಟಿಕ್‌ (ಚುಚ್ಚು ಹುಳು)ಗಳ ಮೂಲಕ ಹರಡುವ ವೈರಲ್ ರೋಗವಾಗಿದ್ದು, ಮಾನವರಿಂದ ಮಾನವರಿಗೆ ಹರಡುವುದಿಲ್ಲ.

ರಾಜ್ಯದಲ್ಲಿ ಈಗಾಗಲೇ ಈ ವರ್ಷದ ಆರಂಭದಲ್ಲೇ ಮಂಗನ ಕಾಯಿಲೆಯಿಂದ ಸಾವು ಸಂಭವಿಸಿದ್ದು, ಆರೋಗ್ಯ ಇಲಾಖೆ ಎಚ್ಚರಿಕೆ ಕ್ರಮಗಳನ್ನು ಹೆಚ್ಚಿಸಿದೆ.

[pj-news-ticker]