Trending

ಕುರಿ ಮೈತೊಳೆಯಲು ಕೆರೆಗೆ ಹೋಗಿದ್ದ ಸಹೋದರರು ನೀರುಪಾಲು : ಬದುಕು ದುರಂತ ಅಂತ್ಯ

Spread the love

ಹಾಸನ : ಶಾಲೆಗೆ ರಜೆಯಿದ್ದ ಕಾರಣ ಕುರಿ ತೊಳೆಯಲು ತೆರಳಿದ್ದ ಇಬ್ಬರು ಸಹೋದರರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವಂತಹ  ಘಟನೆ ಜಿಲ್ಲೆಯ ಅರಸೀಕೆರೆ ತಾಲೂಕಿನ ಜಾವಗಲ್ ಗ್ರಾಮದಲ್ಲಿ ನಡೆದಿದೆ.

ಇಮ್ರಾನ್ (15) ಮತ್ತು ಯಾಸಿನ್ (13) ಮೃತ ದುರ್ದೈವಿಗಳು. ಮಕ್ಕಳನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ.

ನಡೆದಿದ್ದೇನು?

ಜಾವಗಲ್ ಗ್ರಾಮದ ಇಮ್ರಾನ್ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರೆ, ಯಾಸಿನ್ 8ನೇ ತರಗತಿಯ ವಿದ್ಯಾರ್ಥಿಯಾಗಿದ್ದ. ಬೇಸಿಗೆ ರಜೆ ಹಿನ್ನೆಲೆ ಮನೆಯಲ್ಲಿದ್ದ ಬಾಲಕರು, ತಾವು ಸಾಕಿದ್ದ ಕುರಿಗಳನ್ನು ಮೈತೊಳೆಯಲೆಂದು ನಿನ್ನೆ ಸಂಜೆ ಗ್ರಾಮದ ಸಮೀಪವಿರುವ ಜಾವಗಲ್ ದೊಡ್ಡಕೆರೆಗೆ ತೆರಳಿದ್ದರು.

ಕುರಿಗಳ ಮೈತೊಳೆಯುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಕೆರೆಯ ಆಳದ ಸ್ಥಳಕ್ಕೆ ಬಿದ್ದಿದ್ದಾರೆ. ಒಬ್ಬರನ್ನು ರಕ್ಷಿಸಲು ಹೋಗಿ ಮತ್ತೊಬ್ಬರು ನೀರಿನಲ್ಲಿ ಮುಳುಗಿದ್ದಾರೆ ಎನ್ನಲಾಗಿದೆ. ಸ್ಥಳೀಯ ಕುರಿಗಾಹಿಗಳು ತಕ್ಷಣ ಸಹಾಯಕ್ಕೆ ಧಾವಿಸಿದ್ದಾರೆ. ನಂತರ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರ ಸತತ ಕಾರ್ಯಾಚರಣೆಯ ಮೂಲಕ ಬಾಲಕರ ಶವಗಳನ್ನು ಕೆರೆಯಿಂದ ಹೊರತೆಗೆಯಲಾಗಿದೆ.

ಚಿಗುರು ಮೀಸೆಯ ಸಹೋದರರು ಸಾವನ್ನಪ್ಪಿರುವುದು ಜಾವಗಲ್ ಗ್ರಾಮದಲ್ಲಿ ಮೌನ ಆವರಿಸುವಂತೆ ಮಾಡಿದೆ. ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ. ಈ ಕುರಿತು ಜಾವಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

[pj-news-ticker]