ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ (ಏ.23) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ. ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಮಾಹಿತಿ ನೀಡಿದ್ದು, ವಿದ್ಯಾರ್ಥಿಗಳು ಫಲಿತಾಂಶವನ್ನು https://karresults.nic.in/ ಮತ್ತು ಕರ್ನಾಟಕ ಒನ್ ಆ್ಯಪ್ (KarnatakaOne Mobile App) ಮೂಲಕ ಪಡೆಯಬಹುದಾಗಿದೆ.
ಅಲ್ಲದೆ, ವಿದ್ಯಾರ್ಥಿಗಳ ನೊಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸ್ ಆ್ಯಪ್/ಎಸ್‌ಎಂಎಸ್ (SMS) ಮೂಲಕವೂ ಫಲಿತಾಂಶದ ಮಾಹಿತಿಯನ್ನು ಮಂಡಲಿಯಿಂದ ರವಾನಿಸಲಾಗುತ್ತದೆ.
ಈ ವರ್ಷ ಪ್ರಥಮ ಬಾರಿಗೆ ವಿಶೇಷವಾಗಿ, ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯನ್ನು ಡಿಜಿಲಾಕರ್ ಮೂಲಕ ಏಪ್ರಿಲ್ 23ರಂದು ಮಧ್ಯಾಹ್ನ 12 ಗಂಟೆಗೆ https://www.digilocker.gov.in/ ಮೂಲಕ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
