Trending

ಬೆಂಗಳೂರಿನಲ್ಲಿ ಭಾರಿ ಮಳೆ : ಬೌರಿಂಗ್‌ ಆಸ್ಪತ್ರೆಯಲ್ಲಿ ಗೋಡೆ ಕುಸಿದು ಸಾವಿನ ಸಂಖ್ಯೆ 8ಕ್ಕೆ ಏರಿಕೆ, ಸ್ಥಳಕ್ಕೆ ಸಿಎಂ ಭೇಟಿ

Spread the love

ಬೆಂಗಳೂರು: ಶಿವಾಜಿನಗರದ ಬೌರಿಂಗ್‌ ಆಸ್ಪತ್ರೆಯಲ್ಲಿ ಬುಧವಾರ ಸಂಜೆ ಕಾಂಪೌಂಡ್‌ ಗೋಡೆ ಕುಸಿದು ನಡೆದ ದುರಂತದಲ್ಲಿ ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಇನ್ನು ಬೌರಿಂಗ್‌ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಅವರು ಭೇಟಿ ಘಟನೆಯ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ.

ಕಾಂಪೌಂಡ್‌ ಗೋಡೆ ಅವಶೇಷಗಳಡಿ ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತಪಟ್ಟವರೆಲ್ಲ ಬೀದಿ ವ್ಯಾಪಾರಿಗಳು ಎಂದು ತಿಳಿದುಬಂದಿದ್ದು, ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಿಎಂ ಅವರು, ಘಟನೆಯಲ್ಲಿ ಗಾಯಗೊಂಡಿರುವವರಿಗೆ ಉಚಿತವಾಗಿ ಚಿಕಿತ್ಸೆ ನೀಡಬೇಕು ಎಂದು ವೈದ್ಯರಿಗೆ ಸೂಚಿಸಿದ್ದಾರೆ.

ಅಧಿಕಾರಿಗಳಿಗೆ ಸಿಎಂ ತರಾಟೆ

ಹಳೆ ಗೋಡೆಯನ್ನು ತೆರವು ಮಾಡದೆ ಬಿಟ್ಟಿದ್ದು ಯಾಕೆ? ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ತರಾಟೆ ತೆಗೆದುಕೊಂಡಿದ್ದಾರೆ. ಚೀಫ್‌ ಎಂಜಿನಿಯರ್‌ ಯಾರು?, ಸ್ಥಳಕ್ಕೆ ಕರೆಸಿ ಎಂದು ಜಿಬಿಎ ಅಧಿಕಾರಿಗಳಿಗೆ ಕ್ಲಾಸ್‌ ತೆಗೆದುಕೊಂಡಿದ್ದಾರೆ. ಗೋಡೆ ಬಳಿ ಮಣ್ಣು ಹಾಕಿದ್ದರು, ಇದರಿಂದ ಗೋಡೆ ಕುಸಿದಿರಬಹುದು ಎಂದು ಅಧಿಕಾರಿಯೊಬ್ಬರು ಹೇಳಿದಾಗ, ಸ್ಥಳಕ್ಕೆ ಹೋಗಿ ನೋಡಬೇಕಿತ್ತು. ಇದೇ ರೀತಿನಾ ನೀವು ಕೆಲಸ ಮಾಡೋದು ಎಂದು ಸಿಎಂ ಗರಂ ಆಗಿದ್ದಾರೆ.

[pj-news-ticker]