Trending

ಮಂಡಗದ್ದೆ ಬಳಿ ಏಕಾಏಕಿ ರಸ್ತೆಗಿಳಿದ ಚಿರತೆ : ಬೈಕ್ ಡಿಕ್ಕಿಗೆ ಅಂತ್ಯ

Spread the love

ತೀರ್ಥಹಳ್ಳಿ: ತಾಲೂಕಿನ ಮಂಡಗದ್ದೆ ಸಮೀಪ ಚಿರತೆಯೊಂದು ರಸ್ತೆ ದಾಟುವ ವೇಳೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿರುವ ಘಟನೆ ನಡೆದಿದೆ.

ಶಿವಮೊಗ್ಗದಿಂದ ತೀರ್ಥಹಳ್ಳಿಯತ್ತ ಸಾಗುತ್ತಿದ್ದ ಬೈಕ್‌ಗೆ ಏಕಾಏಕಿ ಚಿರತೆ ಅಡ್ಡ ಬಂದಿದ್ದು, ನಿಯಂತ್ರಣ ತಪ್ಪಿದ ಸವಾರ ಚಿರತೆಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ತೀವ್ರತೆಗೆ ಚಿರತೆ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದೆ.

ಘಟನೆಯಲ್ಲಿ ಬೈಕ್ ಸವಾರನಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಚಿರತೆಯ ಮೃತದೇಹವನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.

[pj-news-ticker]