Trending

ವರ್ಷಾಂತ್ಯಕ್ಕೆ ಗ್ರಾಮ ಪಂಚಾಯಿತಿ ಚುನಾವಣೆ : ಪ್ರಿಯಾಂಕ್ ಖರ್ಗೆ

Spread the love

ಕಲಬುರಗಿ: ಈ ವರ್ಷದ ಡಿಸೆಂಬರ್ ಅಂತ್ಯದೊಳಗೆ ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಗ್ರಾಮ ಪಂಚಾಯಿತಿ ಗಡಿ ಗುರುತಿಸುವಿಕೆಗೆ ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನ (ಮೇ 8) ಮುಗಿದಿದ್ದು, ಶೀಘ್ರದಲ್ಲೇ ಚುನಾವಣೆ ನಡೆಯಲಿದೆ. ಬಳಿಕ ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳು ಸಹ ನಡೆಯಲಿವೆ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಯ ಕುರಿತು ಮಾತನಾಡಿದ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪಕ್ಷದ ಹೈಕಮಾಂಡ್ ಸೂಕ್ತ ಸಮಯದಲ್ಲಿ ನಿರ್ಧರಿಸುತ್ತದೆ ಎಂದು ಹೇಳಿದರು.

[pj-news-ticker]