Trending

ತಮಿಳುನಾಡು ಸಿಎಂ ಆಗಿ ನಾಳೆ ವಿಜಯ್​ ಪ್ರಮಾಣವಚನ

Spread the love

ಚೆನ್ನೈ : ಕೊನೆಗೂ ತಮಿಳುನಾಡು ಮುಖ್ಯಮಂತ್ರಿಯಾಗಿ ತಮಿಳಗ ವೆಟ್ರಿ ಕಳಗಂ ಪಕ್ಷದ ಮುಖ್ಯಸ್ಥ, ನಟ ದಳಪತಿ ವಿಜಯ್​​ ಪ್ರಮಾಣವಚನಕ್ಕೆ ಮುಹೂರ್ತ ನಿಗದಿಯಾಗಿದೆ.

TVK ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತಕ್ಕೆ ಅಗತ್ಯವಾದ ಸಂಖ್ಯಾಬಲವನ್ನು ಸಂಪಾದಿಸಿದ ಹಿನ್ನೆಲೆ, ಸರ್ಕಾರ ರಚನೆಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ.

ನಾಳೆ ಚೆನ್ನೈನ ನೆಹರು ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮಧ್ಯಾಹ್ನ 3.15ಕ್ಕೆ ಸಿಎಂ ಆಗಿ ವಿಜಯ್​ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ವಿಜಯ್​ ಜೊತೆ  9 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.

‘ರಾಷ್ಟ್ರಪತಿ ಆಡಳಿತ ತಪ್ಪಿಸಲು ಬೆಂಬಲ’

ಈ ನಡುವೆ ಟಿವಿಕೆಗೆ ಬೆಂಬಲ ಘೋಷಣೆ ಮಾಡಿರುವ ಬಗ್ಗೆ ಚೆನ್ನೈನಲ್ಲಿ ವಿಸಿಕೆ ಮುಖ್ಯಸ್ಥ ತೋಳ್ ತಿರುಮಾವಳವನ್ ಸ್ಪಷ್ಟನೆ ನೀಡಿದ್ದಾರೆ. ನಮ್ಮಿಂದ ವಿಜಯ್​ಗೆ ಅಧಿಕಾರ ತಪ್ಪಿತೆಂಬ ಅಪವಾದ ಬರಬಾರದು. ಅಲ್ಲದೆ ರಾಷ್ಟ್ರಪತಿ ಆಡಳಿತ ತಪ್ಪಿಸಬೇಕಿರುವ ಕಾರಣ ವಿಜಯ್​​ಗೆ ಭೇಷರತ್​​ ಬೆಂಬಲ ಘೋಷಿಸಿದ್ದೇವೆ ಎಂದು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.

[pj-news-ticker]