Trending

ಉತ್ತರ ಪ್ರದೇಶ : ಅತ್ಯಾಚಾರ ಆರೋಪಿಗೆ ಹಾರ ಹಾಕಿ, ಜೈಕಾರ ಕೂಗಿ ಭವ್ಯ ಸ್ವಾಗತ

Spread the love

ಗಾಜಿಯಾಬಾದ್: ಜಾಮೀನಿನ ಮೇಲೆ ಬಿಡುಗಡೆಗೊಂಡ ಅತ್ಯಾಚಾರ ಆರೋಪಿಗೆ ಹೂವಿನ ಹಾರ ಹಾಕಿ, ಹೆಗಲ ಮೇಲೆ ಹೊತ್ತುಕೊಂಡು ಮೆರವಣಿಗೆ ಮಾಡಿದ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಈ ಘಟನೆ ನಡೆದಿದೆ.

ಆರೋಪಿಯನ್ನು ಸುಶೀಲ್‌ ಪ್ರಜಾಪತಿ ಎಂದು ಗುರುತಿಸಲಾಗಿದೆ. ವಕೀಲರೊಬ್ಬರನ್ನು ಪರಿಚಯಿಸುವ ನೆಪದಲ್ಲಿ ಕಾನೂನು ವಿದ್ಯಾರ್ಥಿನಿಯನ್ನು ಫ್ಲ್ಯಾಟ್‌ವೊಂದಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪ ಆತನ ಮೇಲಿದೆ.

ಸುಮಾರು ಒಂಬತ್ತು ತಿಂಗಳ ನಂತರ ಮೇ 17 ರಂದು ಆರೋಪಿಯನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ಗಾಜಿಯಾಬಾದ್‌ ಜೈಲಿನಿಂದ ಹೊರಬರುತ್ತಲೇ ಆತನ ಬೆಂಬಲಿಗರು ಭವ್ಯ ಸ್ವಾಗತ ಕೋರಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ವಿಡಿಯೊದಲ್ಲಿ, ಬಿಳಿ ಬಣ್ಣದ ಉಡುಗೆ ತೊಟ್ಟಿರುವ ಆರೋಪಿಯನ್ನು ಆತನ ಬೆಂಬಲಿಗರು ಹೆಗಲ ಮೇಲೆ ಹೊತ್ತುಕೊಂಡು ಜೈಕಾರ ಕೂಗುವುದನ್ನು ಕಾಣಬಹುದಾಗಿದೆ. ಕೊರಳಿಗೆ ಹೂವಿನ ಹಾರ ಹಾಕಿಕೊಂಡ ಆರೋಪಿಯು, ವಿಜಯದ ಚಿಹ್ನೆಯನ್ನು ತೋರಿಸಿದ್ದಾನೆ.

ಗಂಭೀರ ಕ್ರಿಮಿನಲ್ ಪ್ರಕರಣದ ಆರೋಪಿಯನ್ನು ಹೀಗೆ ವೈಭವೀಕರಿಸುತ್ತಿರುವುದರ ವಿರುದ್ಧ ಕ್ರಮ ಕಠಿಣ ಕ್ರಮಕೈಗೊಳ್ಳುವಂತೆ ನೆಟ್ಟಿಗರು ಒತ್ತಾಯಿಸಿದ್ದಾರೆ.

ಏತನ್ಮಧ್ಯೆ, ಈ ವಿಷಯದ ಬಗ್ಗೆ ತನಿಖೆ ನಡೆಸುವುದಾಗಿ ಪೊಲೀಸರು ಸ್ಥಳೀಯ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.

[pj-news-ticker]