Trending

800 ಕೆಪಿಎಸ್ ಶಾಲೆ ತೆರೆಯಲು ಬೇಗ ಟೆಂಡರ್ ಪ್ರಕ್ರಿಯೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ

Spread the love

ಬೆಂಗಳೂರು: ಮುಂದಿನ ಎರಡು ವರ್ಷಗಳಲ್ಲಿ ರಾಜ್ಯದಲ್ಲಿ 800 ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ತೆರೆಯುವ ಸಂಬಂಧ ಟೆಂಡರ್ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಈ ಕುರಿತು ಸಭೆ ನಡೆಸಿದರು.

ಜೂನ್ 1ರಿಂದ ಶಾಲೆಗಳು ಆರಂಭವಾಗುತ್ತಿದ್ದು, ಕೈಗೊಳ್ಳಬೇಕಾದ ಸಿದ್ದತೆಗಳ ಕುರಿತು ಕ್ರಮ ಕೈಗೊಳ್ಳಬೇಕು. ಎಲ್​ಕೆಜಿಯಿಂದ 10ನೇ ತರಗತಿವರೆಗೆ ಕನ್ನಡ ಮತ್ತು ಆಂಗ್ಲ ಮಾಧ್ಯಮಗಳಲ್ಲಿ ಶಿಕ್ಷಣ ದೊರೆಯಲು ಕೆಪಿಎಸ್ ಶಾಲೆಗಳನ್ನು ಆರಂಭಿಸಲಾಗುತ್ತಿದೆ. ಎರಡು ವರ್ಷಗಳಲ್ಲಿ ಉದ್ದೇಶಿತ 800 ಶಾಲೆಗಳು ಪ್ರಾರಂಭವಾಗಲು ಟೆಂಡರ್ ಪ್ರಕ್ರಿಯೆ ಬೇಗ ನಡೆಸಬೇಕು ಎಂದು ಸೂಚಿಸಿದರು.

ಶಿವಮೊಗ್ಗದಲ್ಲಿ ಜೂನ್ 1ರಂದು ಕೆಪಿಎಸ್ ಶಾಲೆಗೆ ಚಾಲನೆ ನೀಡಲಾಗುವುದು. ಒಂದು ಕೆಪಿಎಸ್ ಶಾಲೆಯಲ್ಲಿ 1,200 ಮಕ್ಕಳಿಗೆ ಪ್ರವೇಶಾವಕಾಶ ಸಿಗಲಿದೆ. ಕೆಪಿಎಸ್ ಶಾಲೆಗಳಿಗೆ ಶಾಲಾ ಬಸ್ ವ್ಯವಸ್ಥೆ ಸೌಲಭ್ಯ ಯಾವ ರೀತಿಯಲ್ಲಿ ಕಲ್ಪಿಸಬಹುದು ಎಂಬ ಬಗ್ಗೆ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

[pj-news-ticker]