Trending

ಶಿವಮೊಗ್ಗ : ತುಂಗಾ ನದಿಯಲ್ಲಿ ಮುಳುಗಿ ಬಾಲಕನ ದಾರುಣ ಅಂತ್ಯ

Spread the love

ಶಿವಮೊಗ್ಗ : ನಗರದಲ್ಲಿ ಸ್ನೇಹಿತರೊಂದಿಗೆ ತುಂಗಾ ನದಿಗೆ ಈಜಲು ತೆರಳಿದ್ದ ಅಪ್ರಾಪ್ತ ಬಾಲಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ.

ನಗರದ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಕುರುಬರ ಪಾಳ್ಯ ಸ್ಮಶಾನದ ಹಿಂಭಾಗದ ತುಂಗಾ ನದಿ ತೀರದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಮೃತ ಬಾಲಕ ತನ್ನ ಸ್ನೇಹಿತರೊಂದಿಗೆ ತುಂಗಾ ನದಿಗೆ ಈಜಲು ತೆರಳಿದ್ದನು. ಈ ವೇಳೆ ಈಜು ಬಾರದ ಕಾರಣ ಆತ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದಾನೆ ಎನ್ನಲಾಗಿದೆ.

ಬಾಲಕ ಮುಳುಗುತ್ತಿರುವುದನ್ನು ಕಂಡು ಗಾಬರಿಗೊಂಡ ಸ್ನೇಹಿತರು ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕಾಗಮಿಸಿದ ಸ್ಥಳೀಯ ಮೀನುಗಾರರು ನದಿಗೆ ಇಳಿದು ಬಾಲಕನನ್ನು ಮೇಲಕ್ಕೆತ್ತಿದರೂ, ಅಷ್ಟರಲ್ಲೇ ಆತ ಮೃತಪಟ್ಟಿದ್ದಾನೆ.

ಈ ಸಂಬಂಧ ದೊಡ್ಡಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

[pj-news-ticker]