ಕನ್ನಡ ಚಿತ್ರರಂಗದ ಖ್ಯಾತ ನಟಿ ಹಾಗೂ ಬಿಗ್ ಬಾಸ್ ಮಾಜಿ ಸ್ಪರ್ಧಿ ಶುಭಾ ಪೂಂಜಾ ಅವರ ವೈವಾಹಿಕ ಜೀವನದಲ್ಲಿ ಬಿರುಗಾಳಿ ಎದ್ದಿದ್ದು, ದಾಂಪತ್ಯ ಜೀವನಕ್ಕೆ ಮುಕ್ತಾಯ ಹಾಡಲು ದಂಪತಿ ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.
ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರಿದೆ ಜೋಡಿ ಎನ್ನಲಾಗಿದೆ.
ಪರಸ್ಪರ ಒಪ್ಪಿಗೆ ಮೇರೆಗೆ ಕೋರ್ಟ್ಗೆ ದಂಪತಿ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ಸುಮಂತ್ ಬಿಲ್ಲವ ಎಂಬುವವರನ್ನ ಮದುವೆಯಾಗಿದ್ದ ಶುಭಾ ಪೂಂಜಾ. ಉಡುಪಿ ಮೂಲದ ಉದ್ಯಮಿ ಸುಮಂತ್ ಅವರನ್ನು ಶುಭಾ ಕೈಹಿಡಿದಿದ್ದರು. 2022 ಜನವರಿಯಲ್ಲಿ ಶುಭಾ ಪೂಂಜಾ ಮತ್ತು ಸುಮಂತ್ ಮದುವೆಯಾಗಿದ್ದರು.
ನಾಲ್ಕೇ ವರ್ಷದಲ್ಲಿ ವಿಚ್ಛೇದನ ಪಡೆಯಲು ದಂಪತಿ ಮುಂದಾಗಿದೆ. ವಿಚ್ಛೇದನಕ್ಕೆ ಕಾರಣ ಬಹಿರಂಗ ಪಡಿಸಲು ಸುಮಂತ್ ನಿರಾಕರಣೆ ಮಾಡಿದ್ದಾರೆ ಎನ್ನಲಾಗಿದೆ. ಮುಂದಿನ ವಿಚಾರಣೆ ವೇಳೆ ಇಬ್ಬರೂ ಕೋರ್ಟ್ಗೆ ಹಾಜರಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಕನ್ನಡಪರ ಹೋರಾಟಗಾರ ಹಾಗೂ ಉದ್ಯಮಿಯಾಗಿರುವ ಉಡುಪಿ ಮೂಲದ ಸುಮಂತ್ ಬಿಲ್ಲವ ಮತ್ತು ನಟಿ ಶುಭಾ ಪೂಂಜಾ ಅವರು ಕೆಲವು ವರ್ಷಗಳ ಕಾಲ ಪ್ರೀತಿಸುತ್ತಿದ್ದರು. ನಂತರ 2022ರ ಜನವರಿ 5 ರಂದು ಶುಭಾ ಪೂಂಜಾ ಅವರ ಸ್ವಂತ ಊರಿನಲ್ಲಿ ಅತ್ಯಂತ ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.
