Trending

ಯಾವುದೇ ಕಾರಣಕ್ಕೂ ರಾಮಲಿಂಗಾರೆಡ್ಡಿ ರಾಜೀನಾಮೆ ಅಂಗೀಕರಿಸಲ್ಲ : ಡಿ.ಕೆ. ಶಿವಕುಮಾರ್‌

Spread the love

ಬೆಂಗಳೂರು : ರಾಮಲಿಂಗಾರೆಡ್ಡಿ ಅವರು ನನ್ನ ಸ್ನೇಹಿತರು, ಅವರೊಂದಿಗೆ ಮಾತನಾಡಿದ್ದು, ಎಲ್ಲಾ ಸಮಸ್ಯೆ ಬಗೆಹರಿಸಲಾಗಿದೆ. ಯಾವುದೇ ಕಾರಣಕ್ಕೂ ಅವರ ರಾಜೀನಾಮೆ ಅಂಗೀಕರಿಸುವುದಿಲ್ಲ ಎಂದು ಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

ವಿಧಾನಸೌಧದಲ್ಲಿ ಮಾಜಿ ಸಿಎಂ ದೇವರಾಜ ಅರಸು ಅವರ ಪುಣ್ಯಸ್ಮರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಶನಿವಾರ ಅವರು ಪ್ರತಿಕ್ರಿಯೆ ನೀಡಿದರು.

ಶುಕ್ರವಾರ ರಾತ್ರಿ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿದ ವಿಚಾರವಾಗಿ ಕೇಳಿದಾಗ, ‘ಅನಗತ್ಯವಾಗಿ ತಲೆಕೆಡಿಸಿಕೊಂಡು ಏನೇನೋ ಸ್ಟೋರಿ ಮಾಡಬೇಡಿ. ಅವರು ರಾಜೀನಾಮೆಯನ್ನು ವಾಟ್ಸಾಪ್‌ನಲ್ಲಿ ಕಳಿಸಿಕೊಟ್ಟಿದ್ದು ನಿಜ. ಈಗ ಆ ವಿಚಾರ ಬಗೆಹರಿಸಲಾಗಿದೆʼ ಎಂದು ತಿಳಿಸಿದರು.

[pj-news-ticker]