Trending

ಜೀರೋ ಟ್ರಾಫಿಕ್‌ನಿಂದ ಜನರಿಗೆ ತೊಂದ್ರೆ ತಪ್ಪಿಸಲು ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿದ ಸಿಎಂ ಡಿಕೆಶಿ

Spread the love

ಬೆಂಗಳೂರು: ಹಾರೋಹಳ್ಳಿ, ಕನಕಪುರ ಕೃತಜ್ಞತೆ ಸಮರ್ಪಣಾ ಪ್ರವಾಸ ಸಂದರ್ಭದಲ್ಲಿ ಜೀರೋ ಟ್ರಾಫಿಕ್‌ನಿಂದ ಸಾರ್ವಜನಿಕರಿಗೆ ತೊಂದರೆಯಾಗುವುದನ್ನು ತಪ್ಪಿಸಲು ಸಿಎಂ ಡಿ.ಕೆ.ಶಿವಕುಮಾರ್ ಅವರು ವಿಧಾನಸೌಧ ಬಳಿಯ ಡಾ. ಬಿ.ಆರ್.ಅಂಬೇಡ್ಕರ್ ಮೆಟ್ರೋ ನಿಲ್ದಾಣದ ಬಳಿಯಿಂದ ಕನಕಪುರ ರಸ್ತೆಯ ಕೊನೆ ನಿಲ್ದಾಣ ಸಿಲ್ಕ್ ಇನ್ಸ್ಟಿಟ್ಯೂಟ್‌ವರೆಗೆ ಮೆಟ್ರೋ ರೈಲಿನಲ್ಲಿ ಭಾನುವಾರ ಪ್ರಯಾಣ ಮಾಡಿದರು.

ಪ್ರಯಾಣದ ವೇಳೆ ಸಾರ್ವಜನಿಕರ ಕುಶಲ ವಿಚಾರಿಸಿದರು. ಯುವಕ, ಯುವತಿಯರು ಸೇರಿದಂತೆ ಪ್ರಯಾಣಿಕರು ಸಿಎಂ ಜತೆ ಸೆಲ್ಫಿ ತೆಗೆದುಕೊಂಡರು. ಸಿಎಂ ಅವರು ಪ್ರಯಾಣಿಕರ ಮೆಟ್ರೊ ಪ್ರಯಾಣದ ಅನುಭವ ಆಲಿಸಿದರು.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಸಿಎಂ ಅವರು, ಇಂದು ನನ್ನೂರು ಕನಕಪುರಕ್ಕೆ ಹೋಗುವಾಗ, ನಮ್ಮ ಮೆಟ್ರೋದಲ್ಲಿ ಸಾರ್ವಜನಿಕರೊಂದಿಗೆ ಪ್ರಯಾಣಿಸುವ ಅವಕಾಶ ಸಿಕ್ಕಿತು. ಮೆಟ್ರೋದಲ್ಲಿ ಪ್ರಯಾಣಿಸುತ್ತಿರುವ ಬೆಂಗಳೂರಿನ ನಾಗರಿಕರ ಮುಖದಲ್ಲಿನ ನೆಮ್ಮದಿಯನ್ನು ಕಂಡಾಗ, ಸುರಕ್ಷಿತ, ಜನಸ್ನೇಹಿ ಹಾಗೂ ಕೈಗೆಟುಕುವ ಸಾರ್ವಜನಿಕ ಸಾರಿಗೆ ನಮ್ಮ ಕರ್ನಾಟಕದ ಜನತೆಗೆ ಎಷ್ಟು ಮುಖ್ಯ ಎಂಬುದು ಮತ್ತೊಮ್ಮೆ ಮನವರಿಕೆಯಾಯಿತು ಎಂದು ಹೇಳಿದ್ದಾರೆ.

[pj-news-ticker]