Trending

ಆನ್‌ಲೈನ್‌ ಗೇಮ್‌ ಆಡಬೇಡ ಎಂದಿದ್ದಕ್ಕೆ ಅಪ್ಪ, ಅಕ್ಕನನ್ನೇ ಕೊಂದ ದ್ವಿತೀಯ ಪಿಯುಸಿ ವಿದ್ಯಾರ್ಥಿ

Spread the love

ಗಂಗಾವತಿ (ಕೊಪ್ಪಳ): ಮಗನೋರ್ವ ಮಾನಸಿಕ ನಿಯಂತ್ರಣ ಕಳೆದುಕೊಂಡು ತಂದೆ-ತಾಯಿ ಸೇರಿದಂತೆ ಕುಟುಂಬಸ್ಥರ ಮೇಲೆಯೇ ಚಾಕುವಿನಿಂದ ದಾಳಿ ಮಾಡಿರುವ ಘಟನೆ ತಾಲೂಕಿನ ಅಯೋಧ್ಯೆ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ.

ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ. ಆರೋಪಿಯು ಆನ್‌ಲೈನ್​ ಪಬ್ ಜೀ ಗೇಮ್ ವ್ಯಸನಿಯಾಗಿದ್ದು, ಈ ಹಿನ್ನೆಲೆಯಲ್ಲಿ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.

ಪಿಯುಸಿ ಓದುತ್ತಿರುವ ಸಾಯಿ ವೆಂಕಟಮಣಿ (18) ಚಾಕು ಇರಿದಿರುವ ಆರೋಪಿ. ನಿನ್ನೆ ರಾತ್ರಿ ಹತ್ತು ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ. ಮಗ ಚಾಕುವಿನಿಂದ ತಾಯಿ ಸೌಜನ್ಯ (40), ಅಕ್ಕ ಪ್ರಗತಿ (19) ಮತ್ತು ತಂದೆ ವೆಂಕಟ ನಾಯ್ಡು ಅವರ ಮೇಲೆ ದಾಳಿ ಮಾಡಿ, ಬಳಿಕ ತನಗೂ ಇರಿದುಕೊಂಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

ಇರಿತದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಅಕ್ಕ ಸ್ಥಳದಲ್ಲಿಯೇ ಮೃತರಾಗಿದ್ದಾರೆ. ತೀವ್ರ ಗಾಯಗೊಂಡಿದ್ದ ತಂದೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರೂ ಕೂಡ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ತೀವ್ರ ಗಾಯಗೊಂಡ ತಾಯಿಯನ್ನು ಬಳ್ಳಾರಿಯ ವಿಮ್ಸ್​ಗೆ ದಾಖಲಿಸಲಾಗಿದೆ. ಕುಟುಂಬಸ್ಥರ ಮೇಲೆ ಚಾಕು ದಾಳಿ ಮಾಡಿದ ಬಳಿಕ ತನಗೂ ಇರಿದುಕೊಂಡು ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಂಗಾವತಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ, ಕೊಪ್ಪಳ ಜಿಲ್ಲಾ ಪೊಲೀಸ್​​ ವರಿಷ್ಠಾಧಿಕಾರಿ ರಾಮ್​ ಎಲ್.ಅರಸಿದ್ದಿ, ಡಿವೈಎಸ್​​ಪಿ, ಗಂಗಾವತಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶಿಲಿಸಿದ್ದಾರೆ.

[pj-news-ticker]