Trending

ರಾಜ್ಯಾದ್ಯಂತ 4.30 ಲಕ್ಷ ‘ಗೃಹಲಕ್ಷ್ಮಿ’ ಫಲಾನುಭವಿಗಳ ಹೆಸರು ಡಿಲೀಟ್

Spread the love

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ  ಯೋಜನೆಯಲ್ಲಿ ವ್ಯಾಪಕ ಪರಿಶೀಲನೆ ನಡೆಸಿದ ಬಳಿಕ ಸುಮಾರು 4.30 ಲಕ್ಷ ಫಲಾನುಭವಿಗಳ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ತಿಳಿದುಬಂದಿದೆ.

ಮಹಿಳಾ ಕುಟುಂಬ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ ಆರ್ಥಿಕ ನೆರವು ನೀಡುವ ಗೃಹಲಕ್ಷ್ಮಿ ಯೋಜನೆಯಲ್ಲಿ ಅನರ್ಹರು ಸೌಲಭ್ಯ ಪಡೆಯುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಸರ್ಕಾರ “ಆಪರೇಷನ್ ಗೃಹಲಕ್ಷ್ಮಿ” ಹೆಸರಿನಲ್ಲಿ ವಿಶೇಷ ಪರಿಶೀಲನಾ ಕಾರ್ಯಾಚರಣೆ ಆರಂಭಿಸಿತ್ತು.

ಅಧಿಕೃತ ಮೂಲಗಳ ಪ್ರಕಾರ, ವಿವಿಧ ಜಿಲ್ಲೆಗಳಲ್ಲಿ ನಡೆದ ಪರಿಶೀಲನೆಯ ವೇಳೆ ಹಲವು ಅಕ್ರಮಗಳು ಪತ್ತೆಯಾಗಿವೆ. ಆದಾಯ ತೆರಿಗೆ ಪಾವತಿದಾರರು, ಸರ್ಕಾರಿ ನೌಕರರ ಕುಟುಂಬಗಳು, ಮೃತ ಫಲಾನುಭವಿಗಳ ಹೆಸರಿನಲ್ಲಿ ಹಣ ಪಡೆಯಲಾಗುತ್ತಿದೆ. ಹಾಗೂ ಒಂದೇ ಕುಟುಂಬದಿಂದ ಒಂದಕ್ಕಿಂತ ಹೆಚ್ಚು ಅರ್ಜಿಗಳು ಸೇರಿದಂತೆ ಹಲವು ಪ್ರಕರಣಗಳು ಬೆಳಕಿಗೆ ಬಂದಿವೆ ಎನ್ನಲಾಗಿದೆ.

ಗೃಹಲಕ್ಷ್ಮಿ ಯೋಜನೆ ರಾಜ್ಯದ ಅತಿದೊಡ್ಡ ನೇರ ನಗದು ವರ್ಗಾವಣೆ ಯೋಜನೆಗಳಲ್ಲಿ ಒಂದಾಗಿದ್ದು, ಲಕ್ಷಾಂತರ ಮಹಿಳೆಯರಿಗೆ ಆರ್ಥಿಕ ನೆರವು ಒದಗಿಸುತ್ತಿದೆ. ಈಗಿನ ಶುದ್ಧೀಕರಣ ಕಾರ್ಯಾಚರಣೆ ಯೋಜನೆಯ ಪಾರದರ್ಶಕತೆ ಮತ್ತು ಪರಿಣಾಮಕಾರಿತ್ವವನ್ನು ಹೆಚ್ಚಿಸುವ ಉದ್ದೇಶದಿಂದ ಕೈಗೊಳ್ಳಲಾಗಿದೆ ಎಂದು ಸರ್ಕಾರ ಹೇಳಿದೆ.

[pj-news-ticker]