ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು ಕಾಂಗ್ರೆಸ್ನ ಐವರು ಮತ್ತು ಬಿಜೆಪಿಯ ಎರಡು ಅಭ್ಯರ್ಥಿಗಳು ಜಯಗಳಿಸಿದ್ದಾರೆ.
ಜೆಡಿಎಸ್ನಿಂದ ಸ್ಪರ್ಧಿಸಿದ್ದ ಏಕೈಕ ಅಭ್ಯರ್ಥಿ ಸೋಲುಂಡಿದ್ದು, ಬಿಜೆಪಿ ಮತ್ತು ಜೆಡಿಎಸ್ನಿಂದ ಕ್ರಾಸ್ ವೋಟಿಂಗ್ ಆಗಿರುವುದೇ ಇದಕ್ಕೆ ಪ್ರಮುಖ ಕಾರಣವಾಗಿದೆ. ಕಾಂಗ್ರೆಸ್ನ 5ನೇ ಅಭ್ಯರ್ಥಿ ವಿನಯ್ ಕಾರ್ತಿಕ್ಗೆ 32 ಮತಗಳು ಬಂದಿದ್ದರೆ ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ಪರ 14 ಮತಗಳು ಬಿದ್ದಿವೆ.
ಯಾವ್ಯಾವ ಅಭ್ಯರ್ಥಿಗೆ ಎಷ್ಟು ಮತ?
- ಜೆಡಿಎಸ್ ಅಭ್ಯರ್ಥಿ ಗೋವಿಂದರಾಜುಗೆ 14 ಮತಗಳು
- ಕಾಂಗ್ರೆಸ್ನ ಬಿ.ಕೆ. ಹರಿಪ್ರಸಾದ್ಗೆ 30 ಮತಗಳು
- ಕಾಂಗ್ರೆಸ್ನ ತಿಪ್ಪಣ್ಣಪ್ಪ ಕಮಕನೂರುಗೆ 30 ಮತಗಳು
- ಕಾಂಗ್ರೆಸ್ನ ಪಿ.ವಿ.ಮೋಹನ್ಗೆ 29 ಮತಗಳು
- ಕಾಂಗ್ರೆಸ್ನ ಬಿ.ಎಸ್.ಶಿವಣ್ಣಗೆ 30 ಮತಗಳು
- ಕಾಂಗ್ರೆಸ್ನ 5ನೇ ಅಭ್ಯರ್ಥಿ ವಿನಯ್ ಕಾರ್ತಿಕ್ಗೆ 32 ಮತ
- ಬಿಜೆಪಿ ಅಭ್ಯರ್ಥಿ ಆರ್.ರಘುಗೆ 29 ಮತಗಳು
- ಬಿಜೆಪಿ ಅಭ್ಯರ್ಥಿ ಲಿಂಗರಾಜು ಪಾಟೀಲ್ಗೆ 27 ಮತಗಳು
