Trending

ಶಿವಮೊಗ್ಗದ ಯೂನಿಯನ್ ಬ್ಯಾಂಕ್‌ನಲ್ಲಿ ಅಗ್ನಿ ಅವಘಡ : ಎಲೆಕ್ಟ್ರಾನಿಕ್ ಉಪಕರಣಗಳು ಭಸ್ಮ

Spread the love

ಶಿವಮೊಗ್ಗ : ನಗರದ ಬಿ.ಹೆಚ್. ರಸ್ತೆಯಲ್ಲಿರುವ ಯೂನಿಯನ್ ಬ್ಯಾಂಕ್ ಶಾಖೆಯಲ್ಲಿ ತಡರಾತ್ರಿ ಸಂಭವಿಸಿದ ಅಗ್ನಿ ಅವಘಡದಿಂದ ಬ್ಯಾಂಕ್‌ನಲ್ಲಿದ್ದ ಕಂಪ್ಯೂಟರ್‌ಗಳು, ಸರ್ವರ್‌ಗಳು, ಏರ್ ಕೂಲರ್‌ಗಳು ಸೇರಿದಂತೆ ಬಹುತೇಕ ಎಲೆಕ್ಟ್ರಾನಿಕ್ ಉಪಕರಣಗಳು ಹಾಗೂ ಪೀಠೋಪಕರಣಗಳು ಬೆಂಕಿಗಾಹುತಿಯಾಗಿವೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರಬಹುದೆಂದು ಶಂಕಿಸಲಾಗಿದೆ. ತಡರಾತ್ರಿ ಬ್ಯಾಂಕ್‌ನಲ್ಲಿ ಯಾರೂ ಇಲ್ಲದ ವೇಳೆ ಬೆಂಕಿ ವ್ಯಾಪಿಸಿದ್ದು, ಇಂದು ಬೆಳಿಗ್ಗೆ ಸಿಬ್ಬಂದಿ ಬ್ಯಾಂಕ್ ತೆರೆದಾಗ ಕಚೇರಿ ಒಳಭಾಗ ಸಂಪೂರ್ಣ ಸುಟ್ಟು ಕರಕಲಾಗಿರುವುದು ಬೆಳಕಿಗೆ ಬಂದಿದೆ.

ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆಯಿಂದ ನಗದು ಅಥವಾ ದಾಖಲೆಗಳಿಗೆ ಹಾನಿಯಾಗಿದೆಯೇ ಎಂಬುದು ಸೇರಿದಂತೆ ಬೆಂಕಿಗೆ ನಿಖರ ಕಾರಣವನ್ನು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

[pj-news-ticker]