Trending

ಮೋದಿ ಮುಖವಾಡ ಧರಿಸಿ ಮೊಬೈಲ್ ಅಂಗಡಿಗೆ ನುಗ್ಗಿದ ಕಳ್ಳ : ₹5 ಲಕ್ಷ ಮೌಲ್ಯದ ಸ್ಮಾರ್ಟ್‌ಫೋನ್‌ ಕಳ್ಳತನ

Spread the love

ಭಿಲ್ವಾರಾ: ರಾಜಸ್ಥಾನದ ಭಿಲ್ವಾರಾ ಜಿಲ್ಲೆಯ ಕರೆಡಾ ಪಟ್ಟಣದಲ್ಲಿ ವಿಚಿತ್ರ ಹಾಗೂ ಆಘಾತಕಾರಿ ಕಳ್ಳತನ ಪ್ರಕರಣ ನಡೆದಿದೆ.

ಕಳ್ಳನೊಬ್ಬ ಪ್ರಧಾನಿ ನರೇಂದ್ರ ಮೋದಿಯವರ ಮುಖವಾಡ ಧರಿಸಿ ಮೊಬೈಲ್ ಫೋನ್ ಅಂಗಡಿಗೆ ನುಗ್ಗಿ, ಐದು ಲಕ್ಷ ರೂಪಾಯಿ ಮೌಲ್ಯದ 40 ಸ್ಮಾರ್ಟ್‌ಫೋನ್‌ಗಳನ್ನು ಕದಿಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಘಟನೆ ಇದೀಗ ಎಲ್ಲರ ಗಮನ ಸೆಳೆದಿದೆ.

ಕರೇಡಾ ಬಸ್ ನಿಲ್ದಾಣದ ಸಮೀಪದ ‘ಮಾತೇಶ್ವರಿ ಮೊಬೈಲ್’ ಅಂಗಡಿಯಲ್ಲಿ ಸೋಮವಾರ ತಡರಾತ್ರಿ ಈ ಕಳತನ ನಡೆದಿದೆ.

ಅಂಗಡಿ ಮಾಲೀಕ ಲಕ್ಷ್ಮಣ್ ಸೇನ್ ಅವರ ಪ್ರಕಾರ, ಸೋಮವಾರ ರಾತ್ರಿ ಈ ಕಳ್ಳತನ ನಡೆದಿದ್ದು, ಮಂಗಳವಾರ ಬೆಳಗ್ಗೆ ಅವರಿಗೆ ವಿಷಯ ಗೊತ್ತಾಗಿದೆ. ಅವರು ಪ್ರತಿದಿನದಂತೆ ಇಂದು ಬೆಳಗ್ಗೆ ಬಂದು ತಮ್ಮ ಅಂಗಡಿಯನ್ನು ತೆರೆದಾಗ ಕಂಗಾಲಾಗಿದ್ದಾರೆ. ಅಂಗಡಿಯ ಒಳಗಿದ್ದ ಸಾಮಗ್ರಿಗಳೆಲ್ಲಾ ನೆಲದ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು ಮತ್ತು ದುಬಾರಿ ಮೊಬೈಲ್ ಫೋನ್‌ಗಳ ಬಾಕ್ಸ್‌ಗಳು ಖಾಲಿಯಾಗಿದ್ದವು.

ಅಂಗಡಿ ಮಾಲೀಕ ನೀಡಿದ ದೂರಿನ ಮೇರೆಗೆ ಕರೇಡಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಂಗಡಿಯ ಒಳಗೆ ಹಾಗೂ ಸುತ್ತಮುತ್ತ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಶಂಕಿತರಲ್ಲಿ ಒಬ್ಬ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೋಲುವ ಮುಖವಾಡ ಧರಿಸಿರುವುದು ಪತ್ತೆಯಾಗಿದೆ.

ತನ್ನ ಗುರುತನ್ನು ಮರೆಮಾಚಲು ಆತ ಈ ಮುಖವಾಡವನ್ನು ಬಳಸಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

 

[pj-news-ticker]