Trending

ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆ ಸಂಕಲ್ಪ ಮಾಡಲಿ: ಪ್ರದೀಪ್ ದೇವಗಿರಿ

Spread the love

ಭದ್ರಾವತಿ: ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನದ ಫಲವಾಗಿ ದೊರೆತ ಸ್ವಾತಂತ್ರ್ಯದ ಮಹತ್ವವನ್ನು ಅರಿತು, ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೊಡುಗೆ ನೀಡಬೇಕು ಎಂದು ತಹಸೀಲ್ದಾರ್ ಪ್ರದೀಪ್ ದೇವಗಿರಿ ಹೇಳಿದರು.

ಹಳೇನಗರದ ಕನಕಮಂಟಪ ಮೈದಾನದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ 80ನೇ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಇಂದಿನ ಯುವ ಸಮುದಾಯ ಮಾದಕ ವಸ್ತುಗಳ ಸೇವನೆ, ಮದ್ಯಪಾನ ಸೇರಿದಂತೆ ವಿವಿಧ ದುಶ್ಚಟಗಳಿಗೆ ಒಳಗಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಯುವಜನರು ದುಶ್ಚಟಗಳಿಂದ ದೂರವಿದ್ದು, ಆರೋಗ್ಯಕರ ಹಾಗೂ ಜವಾಬ್ದಾರಿಯುತ ಜೀವನ ನಡೆಸುವ ಸಂಕಲ್ಪ ಮಾಡಬೇಕು ಎಂದು ಕರೆ ನೀಡಿದರು.

ದೇಶವು ಪ್ರಗತಿಯತ್ತ ಸಾಗಲು ಅಭಿವೃದ್ಧಿ ಕಾರ್ಯಗಳಲ್ಲಿ ಎಲ್ಲರೂ ಕೈಜೋಡಿಸಬೇಕು. ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ಶಾಸಕ ಬಿ.ಕೆ. ಸಂಗಮೇಶ್ವರ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮಕ್ಕೂ ಮುನ್ನ ಪಥಸಂಚಲನ ನಡೆಸಲಾಯಿತು. ಪೊಲೀಸ್ ಇಲಾಖೆ, ಗೃಹರಕ್ಷಕ ದಳ, ನಾಗರಿಕ ಪೊಲೀಸ್ ವಿದ್ಯಾರ್ಥಿ ದಳ ಸೇರಿದಂತೆ ವಿವಿಧ ಶಾಲಾ-ಕಾಲೇಜುಗಳ 22 ತಂಡಗಳು ಪಥಸಂಚಲನದಲ್ಲಿ ಭಾಗವಹಿಸಿ ಗಮನ ಸೆಳೆದವು.

ನಗರಸಭೆ ಅಧ್ಯಕ್ಷೆ ಜೆ.ಸಿ. ಗೀತಾರಾಜಕುಮಾರ್, ಉಪಾಧ್ಯಕ್ಷ ಬಷೀರ್ ಅಹಮದ್, ಪೌರಾಯುಕ್ತ ಕೆ.ಎನ್. ಹೇಮಂತ್, ಡಿವೈಎಸ್ಪಿ ಪ್ರಕಾಶ್ ರಾಥೋಡ್, ತಾಲೂಕು ಪಂಚಾಯಿತಿ ಇಒ ಆಶಾ ಲತಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

[pj-news-ticker]