ಬೆಂಗಳೂರು/ನವದೆಹಲಿ : ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಅಧ್ಯಾಯ ಮುಗಿದಿದೆ ಎಂದು ಭಾವಿಸುವ ಹೊತ್ತಿನಲ್ಲೇ, ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಸಿದ್ದರಾಮಯ್ಯ ಅವರ 2028ರ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ಹೇಳಿಕೆ ಮತ್ತೆ ರಾಜಕೀಯ ಚರ್ಚೆಯ ಕೇಂದ್ರಬಿಂದುವಾಗಿದೆ.
2028ರ ಚುನಾವಣೆಯಲ್ಲಿ ತಾನು ಸ್ಪರ್ಧಿಸುವುದಿಲ್ಲ ಎಂದು ಸಿದ್ದರಾಮಯ್ಯ ನೀಡಿದ್ದ ಹೇಳಿಕೆಗೆ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಆಕ್ಷೇಪ ವ್ಯಕ್ತಪಡಿಸಿದ್ದು, ಇಂತಹ ಹೇಳಿಕೆಗಳು ಪಕ್ಷದ ಭವಿಷ್ಯದ ಚುನಾವಣಾ ತಂತ್ರದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು ಎಂದು ಸೂಚಿಸಿದ್ದಾರೆ ಎನ್ನಲಾಗಿದೆ.
ಕಳೆದ ಜುಲೈನಲ್ಲಿ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ, 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದರು.
ರಾಜಕೀಯ ಕ್ಷೇತ್ರದಲ್ಲಿ ಹಣದ ಪ್ರಭಾವ ಮತ್ತು ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದ ಅವರು, ಚುನಾವಣೆಯಲ್ಲಿ ಸ್ಪರ್ಧಿಸದಿದ್ದರೂ ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯುವುದಾಗಿ ಸ್ಪಷ್ಟಪಡಿಸಿದ್ದರು.
ವರುಣ ಕ್ಷೇತ್ರದ ಜನರು ಮತ್ತೆ ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ. ಆದರೆ, ಇನ್ನು ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂದು ತಾನು ನಿರ್ಧರಿಸಿರುವುದಾಗಿ ಸಿದ್ದರಾಮಯ್ಯ ಹೇಳಿದ್ದರು.
ಹಿಂದಿನ ದಿನಗಳಲ್ಲಿ ಕ್ಷೇತ್ರದ ಜನರೇ ಚುನಾವಣಾ ವೆಚ್ಚಕ್ಕೆ ನೆರವಾಗುತ್ತಿದ್ದರು; ಆದರೆ ಈಗಿನತೆಯಲ್ಲೂ ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ. ‘ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವ ನಿರ್ಧಾರ’ ಮತ್ತು ‘ಸಂಪೂರ್ಣ ರಾಜಕೀಯ ನಿವೃತ್ತಿ ರಾಜಕೀಯದಲ್ಲಿ ಹಣದ ಪ್ರಭಾವ ಹೆಚ್ಚಾಗಿದೆ ಎಂಬುದು ಅವರ ಮಾತಿನ ಸಾರವಾಗಿತ್ತು.
ಸಿದ್ದರಾಮಯ್ಯ ಅವರ ಹೇಳಿಕೆಯ ನಂತರ ‘ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತರಾಗುತ್ತಾರೆಯೇ?’ ಎಂಬ ಚರ್ಚೆ ಆರಂಭವಾಗಿತ್ತು. ಆದರೆ ಅವರ ಮುಂದಿನ ಸ್ಪಷ್ಟೀಕರಣದಲ್ಲಿ, ತಾವು ಸಕ್ರಿಯ ರಾಜಕಾರಣದಿಂದ ಹಿಂದೆ ಸರಿಯುವುದಿಲ್ಲ; ಚುನಾವಣೆಗೆ ಮಾತ್ರ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ ಎಂಬ ಸಂದೇಶ ನೀಡಿದ್ದರು. ಜನರ ಸಮಸ್ಯೆಗಳಿಗೆ ಧ್ವನಿಯಾಗಿಯೇ ಮುಂದುವರಿಯುವುದಾಗಿ ಅವರು ಹೇಳಿದ್ದಾರೆ.
ಇದೀಗ ಇದೇ ಅಂಶವನ್ನು ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರೊಂದಿಗೆ ನಡೆದ ಮಾತುಕತೆಯಲ್ಲೂ ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ. ‘ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವ ನಿರ್ಧಾರ’ ಮತ್ತು ‘ಸಂಪೂರ್ಣ ರಾಜಕೀಯ ನಿವೃತ್ತಿ’ ಎರಡೂ ಬೇರೆ ಎಂಬುದನ್ನು ಸಿದ್ದರಾಮಯ್ಯ ವಿವರಿಸಿದ್ದಾರೆ ಎನ್ನಲಾಗಿದೆ.
