Trending

ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷರಾಗಿ ಶಾಂತವೀರ ನಾಯ್ಕ ನೇಮಕ

Spread the love

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಕಾರ್ಮಿಕ ವಿಭಾಗದ ನೂತನ ರಾಜ್ಯಾಧ್ಯಕ್ಷರಾಗಿ ಶಿವಮೊಗ್ಗದ ಶಾಂತವೀರ ನಾಯ್ಕ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಶಿವಮೊಗ್ಗದ ವಿದ್ಯಾನಗರದ ಪ್ರಿಯಾಂಕ ಲೇಔಟ್ ನಿವಾಸಿಯಾದ ಶಾಂತವೀರ ನಾಯ್ಕ ಅವರಿಗೆ ಈ ಮಹತ್ವದ ಜವಾಬ್ದಾರಿಯನ್ನು ವಹಿಸಲಾಗಿದ್ದು, ಕೆಪಿಸಿಸಿಯ ಹಿರಿಯ ನಾಯಕರ ಮಾರ್ಗದರ್ಶನ ಹಾಗೂ ರಾಜ್ಯದ ಮುಖಂಡರ ಸಹಕಾರದೊಂದಿಗೆ ಕಾರ್ಮಿಕ ವಿಭಾಗವನ್ನು ಸಂಘಟಿಸಿ ಪಕ್ಷದ ಬಲವರ್ಧನೆಗೆ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಅಧಿಕೃತ ನೇಮಕಾತಿ ಆದೇಶದಲ್ಲಿ ತಿಳಿಸಲಾಗಿದೆ.

ಇದುವರೆಗೆ ಕೆಪಿಸಿಸಿ ಕಾರ್ಮಿಕ ವಿಭಾಗದ ಅಧ್ಯಕ್ಷರಾಗಿ ಪಕ್ಷಕ್ಕೆ ನಿಷ್ಠೆಯಿಂದ ಸೇವೆ ಸಲ್ಲಿಸಿದ ಕೆ. ಪುಟ್ಟಸ್ವಾಮಿ ಗೌಡ ಅವರ ಕಾರ್ಯವೈಖರಿ ಮತ್ತು ಕೊಡುಗೆಯನ್ನು ಪಕ್ಷವು ಈ ಸಂದರ್ಭದಲ್ಲಿ ಗೌರವಪೂರ್ವಕವಾಗಿ ಸ್ಮರಿಸಿದೆ.

ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿರುವ ಶಾಂತವೀರ ನಾಯ್ಕ ಅವರ ಮುಂದಿನ ಕಾರ್ಯಚಟುವಟಿಕೆಗಳಿಗೆ ಕೆಪಿಸಿಸಿ ಶುಭ ಹಾರೈಸಿದೆ.

[pj-news-ticker]